ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸಮಾಜದಲ್ಲಿ ಮಹಿಳೆ ಅಬಲೆಯಲ್ಲ ಸಬಲೆ- ಉಪನ್ಯಾಸಕಿ ಸವಿತಾ

Last Updated 21 ಡಿಸೆಂಬರ್ 2021, 15:13 IST
ಅಕ್ಷರ ಗಾತ್ರ

ಕೋಲಾರ: ‘ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆ ಮಾಡುತ್ತಿರುವ ಮಹಿಳೆ ಸಬಲೆಯೇ ಹೊರತು ಅಬಲೆಯಲ್ಲ. ಮಹಿಳೆಯರು ಯಾವುದೇ ಕಾರಣಕ್ಕೂ ಅಸ್ತಿತ್ವ ಕಳೆದುಕೊಳ್ಳದೆ ಸ್ವಾಭಿಮಾನದಿಂದ ಬದುಕಬೇಕು’ ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಸವಿತಾ ಹೇಳಿದರು.

ನಗರದ ಹೊರವಲಯದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಹುಣ್ಣಿಮೆ ಹಾಡು ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯು ನಾಲ್ಕು ಗೋಡೆಗಳ ಮಧ್ಯೆ ಕುಟುಂಬ ನಿರ್ವಹಣೆಗಷ್ಟೇ ಸೀಮಿತವೆಂಬ ಕಾಲ ಬದಲಾಗಿದೆ. ಮಹಿಳೆಯರು ಈಗ ಪುರುಷರಿಗೆ ಸರಿ ಸಮಾನ’ ಎಂದು ಅಭಿಪ್ರಾಯಪಟ್ಟರು.

‘ಹುಣ್ಣಿಮೆ ಹಾಡು 175 ಕಂತಿನ ಕಾರ್ಯಕ್ರಮ ನಡೆಸಿರುವುದು ಬಹಳ ಕಷ್ಟದ ಕೆಲಸ. ಆದರೂ ಆದಿಮ ನಿರ್ವಹಿಸಿಕೊಂಡು ಬಂದಿದೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳಾ ಸಮಸ್ಯೆಗಳ ಕುರಿತು ನಿರಂತರವಾಗಿ ಕಾರ್ಯಾಗಾರ ನಡೆಸುತ್ತಾ ಬಂದಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಪ್ರಸ್ತುತ ಸಮಾಜದಲ್ಲಿ ಮಹಿಳೆ ಎಷ್ಟೇ ಓದಿಕೊಂಡರೂ ಮನೆ ಕೆಲಸ ಮಾಡಿಕೊಂಡಿರಬೇಕಿದೆ. ಈ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿರುಬಹುದು. ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದ್ದಾಳೆ. ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ, ಸಾಹಿತ್ಯ, ರಾಜಕೀಯ, ವ್ಯವಸಾಯ ಕ್ಷೇತ್ರದಲ್ಲೂ ತನ್ನ ಅಸ್ಮಿತೆ ಉಳಿಸಿಕೊಂಡಿದ್ದಾಳೆ’ ಎಂದು ಅಭಿಪ್ರಾಯಪಟ್ಟರು.

‘ಜೀವನದಲ್ಲಿ ಮಹಿಳೆ ಮತ್ತು ಪುರುಷ ಸಮಾಜದ ಅವಿಭಾಜ್ಯ ಅಂಗ. ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು. ಉನ್ನತ ಸ್ಥಾನ ಅಲಂಕರಿಸಿ ಪುರುಷರಿಗೆ ಸಮನಾಗಿ ಬೆಳೆಯಬೇಕು’ ಎಂದು ಕಿವಿಮಾತು ಹೇಳಿದರು.

ನಮ ತುಳುವೆರ್ ಕಲಾ ಸಂಘಟನೆ ಕಲಾವಿದರು ‘ಅವ್ವ ನನ್ನವ್ವ’ ನಾಟಕ ಪ್ರದರ್ಶಿಸಿದರು. ಚಳವಳಿ ಸಂಗಾತಿ ಓ.ಕೆ.ಹೇರ್ ಸ್ಟೈಲ್ ಬಾಬು ಅವರಿಗೆ ನುಡಿನಮನ ಸಲ್ಲಿಸಲಾಯಿತು. ಆದಿಮ ಸಾಂಸ್ಕೃತಿಕ ಕೇಂದ್ರದ ಖಜಾಂಚಿ ಹ.ಮಾ.ರಾಮಚಂದ್ರ, ರಂಗ ನಿರ್ದೇಶಕ, ಗುರುರಾಜ ಮಾರ್ಪಳ್ಳಿ, ಕಲಾವಿದರಾದ ಸುಗಂಧಿ ಉಮೇಶ್ ಕಲ್ಮಾಡಿ, ವಾಣಿ ಸುಕುಮಾರ್, ನಾವೆಂಕಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT