ಶನಿವಾರ, ಅಕ್ಟೋಬರ್ 1, 2022
23 °C

ಮಹಿಳೆ ಕೊಲೆ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್‌: ಹೂವು ವ್ಯಾಪಾರ ಮಾಡುತ್ತಿದ್ದ ಮಹಿಳೆಯನ್ನು ಆಕೆಯ ಮನೆಯಲ್ಲಿಯೇ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸ್ ವಿಶೇಷ ತಂಡ ಬಂಧಿಸಿದೆ.

ಆಂಡರ್‌ಸನ್‌ಪೇಟೆಯ ಪಚ್ಚಪ್ಪ ರಸ್ತೆಯ ನಿವಾಸಿ ಸುಲೋಚನ (57) ಎಂಬುವರನ್ನು ಜುಲೈ 15ರ ರಾತ್ರಿ ಉಸಿರುಗಟ್ಟಿಸಿ ಸಾಯಿಸಿ, ಅವರ ಬಳಿ ಇದ್ದ ಚಿನ್ನದ ಸರ ಮತ್ತು ಮೊಬೈಲ್ ಕಿತ್ತು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಅವರ ಗಂಡ ಶೇಖರ್ ಆಂಡರ್‌ಸನ್‌ಪೇಟೆ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಸಂಬಂಧವಾಗಿ ಇನ್‌ಸ್ಪೆಕ್ಟರ್ ವೆಂಕಟರಮಣಪ್ಪ, ವರುಣ್‌ಕುಮಾರ್ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿತ್ತು. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಓಲ್ಡ್ ಸ್ವರ್ಣಕುಪ್ಪಂ ನಿವಾಸಿಗಳಾದ ಮಣಿಗಂಡ, ಮೆಕಾನಿಕ್‌ ರವಿಕಿರಣ್‌, ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ಮತ್ತು ಸಂಜಯ್‌ ಅವರನ್ನು ವಿಶೇಷ ತಂಡ ಬಂಧಿಸುವಲ್ಲಿ ಸಫಲವಾಗಿದೆ. ಆರೋಪಿಗಳಿಂದ ಕಳವು ಮಾಲು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು