ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ತಂಬಾಕು ರಹಿತ ದಿನ: ತಂಬಾಕು ರಹಿತ ಸಮಾಜ ನಿರ್ಮಿಸಲು ಕರೆ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಾಗರಾಜ ಕಿವಿಮಾತು
Last Updated 31 ಮೇ 2022, 14:47 IST
ಅಕ್ಷರ ಗಾತ್ರ

ಕೋಲಾರ: ‘ತಂಬಾಕು ಉತ್ಪನ್ನ ಸೇವನೆ ಚಟ ತ್ಯಜಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶಕೆ.ಆರ್.ನಾಗರಾಜ ಕಿವಿಮಾತು ಹೇಳಿದರು.

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ‌ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

‘ದೇಶದಲ್ಲಿ ಶೇ 42ರಷ್ಟು ಪುರುಷರು ಮತ್ತು ಶೇ 10ರಷ್ಟು ಮಹಿಳೆಯರು ತಂಬಾಕು ಉತ್ಪನ್ನಗಳನ್ನು ಸೇವಿಸಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂಬಾಕು ಸೇವನೆಯು ಜೀವಕ್ಕೆ ಅಪಾಯವೆಂದು ತಿಳಿದಿದ್ದರೂ ಜನ ಅದರ ಚಟಕ್ಕೆ ಬಿದ್ದು ಹಾಳಾಗುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ತಂಬಾಕು ಉತ್ಪನ್ನಗಳ ಸೇವನೆಯಿಂದ 60 ರೀತಿಯ ಮಾರಕ ಕಾಯಿಲೆಗಳು ಮತ್ತು ಭಯಾನಕ ಕ್ಯಾನ್ಸರ್ ರೋಗಕ್ಕೆ ತುತ್ತಾಗುವ ಸಂಭವವಿದೆ. ಆದ ಕಾರಣ ಜನ ಎಚ್ಚೆತ್ತು ತಂಬಾಕುರಹಿತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು. ಎಲ್ಲರ ಆರೋಗ್ಯ ಹಿತಾಸಕ್ತಿಗಾಗಿ ತಂಬಾಕು ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ’ ಎಂದು ಮನವಿ ಮಾಡಿದರು.

ಶೇ 10ರಷ್ಟು ಮರಣ: ‘ಸಂವಿಧಾನ ಅನುಚ್ಛೇದ 21ರಲ್ಲಿ ಪ್ರತಿ ಪ್ರಜೆಯೂ ಸ್ವತಂತ್ರವಾಗಿ ಜೀವಿಸುವ ಮೂಲಭೂತ ಹಕ್ಕು ಹೊಂದಿರುತ್ತಾನೆ. ಆದರೆ, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವಂತಿಲ್ಲ. ದೇಶದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಶೇ 10ರಷ್ಟು ಪ್ರಮಾಣದಲ್ಲಿ ಮರಣ ಹೊಂದಿರುತ್ತಾರೆ. ಈ ಮಾಹಿತಿ ವೈಜ್ಞಾನಿಕವಾಗಿಯೂ ಸಹ ಸಾಬೀತಾಗಿದೆ’ ಎಂದರು.

‘ತಂಬಾಕು ಉತ್ಪನ್ನ ಬಳಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. 18 ವರ್ಷದಿಂದ 25 ವರ್ಷದೊಳಗಿನ ಯುವಕ ಯುವತಿಯರು ತಂಬಾಕು ಉತ್ಪನ್ನಗಳಿಗೆ ಆಕರ್ಷಿತರಾಗಿ ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆ. ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

ಜಾಹೀರಾತು ನಿಷೇಧ: ‘ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧಿಸಲಾಗಿದೆ. ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಅಂಗಡಿ ಮಾಲೀಕರು ತಂಬಾಕು ಉತ್ಪನ್ನಗಳನ್ನು ಪ್ರದರ್ಶಿಸಬಾರದು. ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ತಂಬಾಕು ಮುಕ್ತ ಪ್ರದೇಶಗಳೆಂಬ ಫಲಕ ಅಳವಡಿಸಬೇಕು’ ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ರಘುಪತಿಗೌಡ ಮಾಹಿತಿ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್.ಹೊಸಮನಿ, ಜಿಲ್ಲಾ ನ್ಯಾಯಾಧೀಶ ದೇವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT