ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ: ಮಕ್ಕಳಿಗೆ ಗುಣಮಟ್ಟದ ಆಹಾರಕ್ಕೆ ಸಲಹೆ

Last Updated 24 ಸೆಪ್ಟೆಂಬರ್ 2021, 7:09 IST
ಅಕ್ಷರ ಗಾತ್ರ

ಮುಳಬಾಗಿಲು: ‘ಆರೋಗ್ಯವಂತ ಶಿಶುವಿನಿಂದ ಆರೋಗ್ಯಕರ ಸಮಾಜ ಕಟ್ಟಬಹುದು. ಹಾಗಾಗಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಹೇಳಿದರು.

ನಗರದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ಮುಳಬಾಗಿಲು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಶಿಬಿರ ಉದ್ಪಾಟಿಸಿ ಅವರು
ಮಾತನಾಡಿದರು.

ಪೃಕೃತಿದತ್ತವಾಗಿ ಬೆಳೆದ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕಾಂಶ ಇರುತ್ತದೆ. ಪೌಷ್ಟಿಕ ಆಹಾರದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸರ್ಕಾರ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ನೀಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಯಾದವಾಡ ಮಾತನಾಡಿ, ಮಕ್ಕಳ ಆರೋಗ್ಯದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಶ್ಲಾಘನೀಯವಾಗಿ ದುಡಿಯುತ್ತಿದ್ದಾರೆ. ಇದು ಸಾಮಾಜಿಕ ಜವಾಬ್ದಾರಿಯುತವಾದ ಕೆಲಸವಾಗಿದೆ ಎಂದರು.

ಸೆ. 30ರಂದು ದೇಶದಾದ್ಯಂತ ಲೋಕ ಆದಾಲತ್ ಹಮ್ಮಿಕೊಳ್ಳಲಾಗುತ್ತಿದೆ. ಮುಳಬಾಗಿಲು ನ್ಯಾಯಾಲಯ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು
ಕೋರಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಂ.ಜಿ. ಪಾಲಿ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕಾಂಶ ಅಂಶವನ್ನು ತಾಯಿ ಗರ್ಭದಲ್ಲಿ ಇರುವಾಗಿನಿಂದಲೂ ಮಗು ಹುಟ್ಟುವವರೆವಿಗೂ ನೀಡಲು ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಶ್ರಮಿಸುತ್ತಿದೆ ಎಂದರು.

ವಕೀಲ ಎನ್. ಶೇಖರ್ ಮಾತನಾಡಿ, ಪೂರ್ವಿಕರ ಜೀವನ ಪದ್ಧತಿಯಿಂದ ಯಾವುದೇ ಕಾಯಿಲೆ ಬರುತ್ತಿರಲಿಲ್ಲ. ಅವರ ಜೀವನಶೈಲಿ ಇಂದಿಗೂ ದಾರಿದೀಪವಾಗಿದೆ ಎಂದು
ಹೇಳಿದರು.

ತಾಲ್ಲೂಕುವಕೀಲರಸಂಘದಅಧ್ಯಕ್ಷಎಂ.ಎಸ್.ಶ್ರೀನಿವಾಸರೆಡ್ಡಿ,ಗೌರವಾಧ್ಯಕ್ಷಪಿ.ಎಂ.ಸದಾಶಿವಂಯ್ಯಮಾತನಾಡಿದರು.ಕಾರ್ಯದರ್ಶಿ ಸಿ. ಸುಬ್ರಮಣಿ, ಖಜಾಂಚಿ ಸಂತೋಷ್‌ ಕುಮಾರ್, ವಕೀಲರಾದ ರಾಜ್‌ಕುಮಾರ್, ಆನಂದ್, ಬಿ.ಜೆ. ಮುನಿರತ್ನಂ, ಮುನಿರಾಜು, ಆನಂದ್, ಬಾಲಾಜಿ, ದಯಾನಂದ್, ಜಯಪ್ಪ, ಸಿ.ಎಂ. ನಯಾಜ್ಅಹಮದ್, ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್‌ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT