ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಘಾಟನೆಯಾಗದ ಅಣೆಕಟ್ಟು; ಜಲಾಶಯ ಇದ್ದೂ ಉಪಯೋಗವಿಲ್ಲ!

Published 19 ಜೂನ್ 2023, 15:35 IST
Last Updated 19 ಜೂನ್ 2023, 15:35 IST
ಅಕ್ಷರ ಗಾತ್ರ

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಜಲಾಶಯದ ನೀರು ಸರಬರಾಜು ವ್ಯವಸ್ಥೆ ಬಹುತೇಕ ಪೂರ್ಣಗೊಂಡಿದ್ದರೂ ಉದ್ಘಾಟನೆಯಾಗದ ಕಾರಣ ನೀರು ಪೂರೈಕೆ ಆಗುತ್ತಿಲ್ಲ.

ಕುಡಿಯುವ ನೀರಿಗೆ ಮೀಸಲಾದ ಜಿಲ್ಲೆಯ ಏಕೈಕ ಯೋಜನೆ ಇದಾಗಿದೆ. ಕೋಲಾರ, ಬಂಗಾರಪೇಟೆ, ಮಾಲೂರು ತಾಲ್ಲೂಕು ಒಳಗೊಂಡಂತೆ ಮಾರ್ಗಮಧ್ಯದ 45 ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. 

2022ರ ಆಗಸ್ಟ್‌ನಲ್ಲೇ ಯರಗೋಳ್ ಅಣೆಕಟ್ಟೆಯಲ್ಲಿ ನೀರು ತುಂಬಿ ಹರಿಯಿತು. ಈಗಲೂ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹವಿದೆ.

ಯರಗೋಳ್ ಗ್ರಾಮದ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲಾಗಿದೆ. ಮಾರ್ಕಂಡೇಯ ಜಲಾಶಯದಿಂದ ತಮಿಳುನಾಡಿಗೆ ವ್ಯರ್ಥವಾಗಿ ಹೋಗುತ್ತಿದ್ದ ನೀರು ತಡೆಗಟ್ಟಲು ಎರಡು ಬೆಟ್ಟಗಳಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲಾಗಿದೆ. 

2006ರಲ್ಲಿ ಜಲಾಶಯ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದು, ಕಾಮಗಾರಿಯ ಜವಾಬ್ದಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕೋಲಾರ ವಿಭಾಗ ವಹಿಸಿಕೊಂಡಿತ್ತು. ಆಂಧ್ರಪ್ರದೇಶ ಮೂಲದ ರಾಮ್ಕಿ ಕಂಪನಿ ಗುತ್ತಿಗೆ ಪಡೆದಿದ್ದು, 24 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೇಳಿ, ಬರೋಬ್ಬರಿ 16 ವರ್ಷ ತೆಗೆದುಕೊಂಡಿದೆ.

ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಡ್ಯಾಂ 
ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಡ್ಯಾಂ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT