ಕೋಲಾರಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ, ಮನೆ ವೀಕ್ಷಣೆ

ಕೋಲಾರ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವುದಾಗಿ ಘೋಷಿಸಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಸ್ಥಿತಿಗತಿ ತಿಳಿಯಲು ಅವರ ಪುತ್ರ ಹಾಗೂ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಭೇಟಿ ನೀಡಿದರು.
ಕೋಲಾರಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಸಿದ್ದರಾಮಯ್ಯ ಅವರ ವಾಸ್ತವ್ಯಕ್ಕೆ ಹುಡುಕಿರುವ ಮನೆ ವೀಕ್ಷಿಸಿದರು.
ನಂತರ ಬಸವನತ್ತ ಗ್ರಾಮಕ್ಕೆ ಭೇಟಿ ನೀಡಿ ಗಂಗಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಗ್ರಾಮಸ್ಥರು ಆರತಿ ಬೆಳಗಿ ಸ್ವಾಗತಿಸಿದರು.
ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ ಕ್ಲಾಕ್ ಟವರ್ ವೃತ್ತದಲ್ಲಿರುವ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಆ ಬಳಿಕ ಆಜಾದ್ ನಗರದಲ್ಲಿರುವ ಎನ್ .ಎಸ್ ಕನ್ವೆನ್ಷನ್ ಹಾಲ್‌ನಲ್ಲಿ ಅಲ್ಪಸಂಖ್ಯಾತರ ಮುಖಂಡರ ಸಭೆ ನಡೆಸಲಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ಮೂರು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಹೋಗಿದ್ದಾರೆ. ಅದರ ಬೆನ್ನಲ್ಲೇ, ಡಾ.ಯತೀಂದ್ರ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ. ಕ್ಷೇತ್ರದಲ್ಲಿ ವಾತಾವರಣ ಹೇಗಿದೆ ಎಂಬುದನ್ನು ಪರಿಶೀಲಿಸಲು, ಜನರ ಮನಸ್ಥಿತಿ ಅರಿಯಲು ಈ ಭೇಟಿ ಎಂಬುದು ಸ್ಪಷ್ಟವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.