ಕೋಲಾರ: ಪರಿಶಿಷ್ಟ ಜಾತಿ, ಪಂಗಡದ ಪದವಿ ವಿದ್ಯಾರ್ಥಿಗಳಿಗೆ ಬಾಕಿ ಇರುವ ವಿದ್ಯಾರ್ಥಿ ವೇತನ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದ ಬಾಲಕರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಾಂಶುಪಾಲರ ಕೊಠಡಿ ಮುಂದೆ ಮಂಗಳವಾರ ಧರಣಿ ನಡೆಸಿದರು.

2009ನೇ ಸಾಲಿನಿಂದ 2010-11ನೇ ಸಾಲಿನವರೆಗೆ ಪರಿಶಿಷ್ಟ ಜಾತಿ, ಪಂಗಡದ ಪದವಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಸಲ್ಲಿಸಿರುವ ಅರ್ಜಿಗಳಿಗೆ ಇದುವರೆಗೆ ಯಾವ ಪ್ರತಿಕ್ರಿಯೆಯೂ ದೊರೆತಿಲ್ಲ. ಸರ್ಕಾರದಿಂದ ಹಣ ಮಂಜೂರಾದರೂ ವಿದ್ಯಾರ್ಥಿ ವೇತನ ವಿತರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ವರ್ಷ ಬಿಡುಗಡೆಯಾಗಿದ್ದ 4 ಕೋಟಿ ರೂಪಾಯಿ ವಿದ್ಯಾರ್ಥಿ ವೇತನ ತಾಲ್ಲೂಕು ಆಡಳಿತದ ನಿರ್ಲಕ್ಷ್ಯ ಧೋರಣೆ ಪರಿಣಾಮ ತಡೆಹಿಡಿಯಲ್ಪಟ್ಟಿದೆ. ಮತ್ತೆ ಸರ್ಕಾರದಿಂದ ಅನುಮೋದನೆಯಾಗಬೇಕಿದೆ. ಅದಕ್ಕೆ ಕಾಲೇಜು ವತಿಯಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿ ವೇತನ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಫೆ. 4ರಂದು ಧರಣಿ ನಡೆಸಲಾಗಿತ್ತು. ಆಗ ವಿದ್ಯಾರ್ಥಿಗಳ ಅಹವಾಲು ಆಲಿಸಿದ್ದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಪ್ರಭಾರಿ ಅಧಿಕಾರಿ ಸುಗ್ಗಂಡಹಳ್ಳಿ ಮುನಿರಾಜು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಅದು ಇನ್ನೂ ಈಡೇರಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.