ಕೋಲಾರ: ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದ ಬುಡ್ಗಜಂಗಮ ಸಮುದಾಯದವರು ಜಿಲ್ಲಾಧಿಕಾರಿ ಡಿ.ಕೆ.ರವಿ ಅವರು ನೀಡಿದ ಭರವಸೆಯ ಮೇರೆಗೆ ಧರಣಿ ಬುಧವಾರ ಕೊನೆಗೊಳಿಸಿದರು.

ಅದಕ್ಕೂ ಮುನ್ನ ಶಾಸಕರಾದ ಜಿಮಂಜುನಾಥ, ಕೆ.ಎಸ್.ಮಂಜುನಾಥ ಮತ್ತು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರು ಜಿಲ್ಲಾಧಿಕಾರಿ ಜತೆ ಸುದೀರ್ಘ ಚರ್ಚೆ ನಡೆಸಿದರು.

ರಾಜ್ಯದಲ್ಲಿ ಎಲ್ಲೆಡೆ ಬುಡ್ಗಜಂಗಮರಿಗೆ ಪ್ರಮಾಣಪತ್ರ ನೀಡುತ್ತಿರುವಾಗ ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಮಾಣಪತ್ರ ನೀಡದೆ ಸತಾಯಿಸಲಾಗುತ್ತಿದೆ ಎಂದು ಶಾಸಕರು ಮತ್ತು ಮಾಜಿ ಸಚಿವೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಅನುಸಾರ ಸಮಗ್ರ ಪರಿಶೀಲನೆ ನಡೆಸಿ ವಾಸ್ತವದ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕಾಗುತ್ತದೆ, ಒಂದೊಂದು ಪ್ರಕರಣವೂ ಭಿನ್ನತೆ ಇರುತ್ತದೆ ಹೀಗಿದ್ದಾಗ ಏಕ ಪಕ್ಷೀಯ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು. ತಾವು ಈಗಾಗಲೇ ನೀಡಿರುವ ಆದೇಶವನ್ನು ಬದಲಾಯಿಸಲು ಆಗುವುದಿಲ್ಲ. ಸಂಬಂಧಿಸಿದ ಪ್ರಾಧಿಕಾರದ ವತಿಯಿಂದ ಬದಲಾವಣೆ ಸಾಧ್ಯ.

ಅವುಗಳನ್ನು ಹತಡಸಿ ಹೊಸ ಪ್ರಕರಣಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶೇಷಾದ್ರಿ, ಪರಿಶಿಷ್ಠ ಪಂಗಡಗಳ ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಡಾ.ಬಾಲಗುರುಮೂರ್ತಿ, ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಕೃಷ್ಣಮೂರ್ತಿ, ವೆಂಕಟರಾಮ್, ಗಂಗಾಧರ್, ಹಾರೋಹಳ್ಳಿ ನಾರಾಯಣಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.