ಕೊಪ್ಪಳ: ನಗರದ ಹಜರತ್ ರಾಜಾ ಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ₹10 ಲಕ್ಷ ಅನುದಾನ ನೀಡುವುದಾಗಿ ಸಂಸದ ಕೆ.ರಾಜಶೇಖರ ಹಿಟ್ನಾಳ ಭರವಸೆ ನೀಡಿದರು.

ದರ್ಗಾದ ಆವರಣದಲ್ಲಿ ನಿರ್ಮಾಣಗೊಳ್ಳುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕಾಗಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿ, ‘ಸಮಾಜದ ಅಭಿವೃದ್ಧಿ ಪರ ಕೆಲಸಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದರು.

ಅಧ್ಯಕ್ಷತೆ ವಹಿಸಿದ ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್. ಆಸೀಫ್ ಅಲಿ ಮಾತನಾಡಿ, ‘ರಾಜಾ ಬಾಗ್ ಸವಾರ್ ದರ್ಗಾ ಕಮಿಟಿಯ ಪದಾಧಿಕಾರಿಗಳು ಉತ್ತಮ ಅಭಿವೃದ್ಧಿ ಪರ ಕೆಲಸ ಮಾಡಿರುವುದು ಸಂತಸದ ವಿಷಯವಾಗಿದೆ. ಅವಧಿ ಮುಗಿದರೂ ಉತ್ತಮ ಕಾರ್ಯಗಳನ್ನು ಪೂರ್ಣಗೊಳ್ಳಲು ಸಮಾಜದವರು ಕಾಲಾವಕಾಶ ನೀಡಿದ್ದಾರೆ’ ಎಂದರು.

ಯುಸೂಫಿಯಾ ಮಸೀದಿಯ ಮೌಲಾನಾ ಮುಫ್ತಿ ಮೊಹಮ್ಮದ್ ನಜೀರ್ ಅಹಮದ್ ಖಾದ್ರಿ ತಸ್ಕಿನಿ ಮಾತನಾಡಿ, ‘ಸಮಾಜಕ್ಕೆ ಬೇಕಾದ ಬೇಡಿಕೆಗಳ ಈಡೇರಿಕೆಗಾಗಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಶ್ರಮಿಸಬೇಕು. ಉತ್ತಮ ಕಾರ್ಯಗಳಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.

ದರ್ಗಾ ಕಮಿಟಿಯ ಅಧ್ಯಕ್ಷ ಮೌಲಾ ಹುಸೇನ್ ಜಮೆದಾರ್, ವಕೀಲ ಅಬ್ದುಲ್ ಅಜಿಜ್ ಚೌಥಾಯಿ, ನಿವೃತ್ತ ಉಪ ತಹಶೀಲ್ದಾರ್ ಲಾಯಕ್ ಅಲಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಪೀರಾಹುಸೇನ್ ಹೊಸಳ್ಳಿ, ಸಮಾಜದ ಮುಖಂಡರಾದ ಇಮ್ರಾಹಿಂಸಾಬ್ ಅಡ್ಡೆವಾಲೆ, ಹುಸೇನಪೀರ ಚಿಕನ್, ಮಾನ್ವಿ ಪಾಷಾ, ಸಿರಾಜ್ ಕೋಲ್ಕಾರ್, ಕರೀಮ್ ಸಾಬ್, ಅಜೀಮ್ ಅತ್ತಾರ್, ಅಕ್ಬರ್ ಪಾಷಾ ಪಲ್ಟನ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಮಿತಿಯ ನಾಮನಿರ್ದೇಶಿತ ಸದಸ್ಯ ಸಲೀಂ ಅಳವಂಡಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.