ಕೊಪ್ಪಳ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನ ಸಮಾವೇಶಕ್ಕೆ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಹತ್ತು ಸಾವಿರ ಜನ ಪಾಲ್ಗೊಳ್ಳುವರು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ನಗರದಲ್ಲಿ ಶನಿವಾರ ನಡೆದ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಈ ಕಾರ್ಯಕ್ರಮ ಇತಿಹಾಸದ ಪುಟ ಸೇರಲಿದೆ. ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೇವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲರೂ ಪಾಲ್ಗೊಳ್ಳುವರು’ ಎಂದು ತಿಳಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಎಐಸಿಸಿ ಕೊಪ್ಪಳ ಉಸ್ತುವಾರಿ ವಿಜಯಕುಮಾರ್, ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಮುಖಂಡರಾದ ಎಸ್.ಬಿ. ನಾಗರಳ್ಳಿ, ಜುಲ್ಲು ಖಾದ್ರಿ, ಕೃಷ್ಣರೆಡ್ಡಿ ಗಲಬಿ, ಕಾಟನ್ ಪಾಷಾ, ಗೂಳಪ್ಪ ಹಲಿಗೇರಿ, ಗಾಳೆಪ್ಪ ಪೂಜಾರ್, ಮಾಲತಿ ನಾಯಕ್, ಕೆ.ಎಂ. ಸೈಯದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.