ಮಂಗಳವಾರ, ಮಾರ್ಚ್ 28, 2023
25 °C
ಕುಂಟೋಜಿ ಗ್ರಾಮದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: 103 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರಟಗಿ: ತಾಲ್ಲೂಕಿನ ಹೊಸ ಕುಂಟೋಜಿ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಸಸಿಗೆ ನೀರೆರೆದು ಚಾಲನೆ ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ವಿವಿಧೆಡೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿದರು. ಒಟ್ಟು 103 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಶಾಲಾ ಆವರಣದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಅಧಿಕಾರಿಗಳ ಸಮ್ಮುಖದಲ್ಲಿ ಹೊಸ ಕುಂಟೋಜಿ ಸಹಿತ ವಿವಿಧ ಗ್ರಾಮಸ್ಥರ ಅಹವಾಲು ಆಲಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಬಿ. ಫೌಜಿಯಾ ತರುನ್ನುಮ್, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಲ್ಲಮ್ಮ, ಉಪಾಧ್ಯಕ್ಷೆ ಭಾಗ್ಯಶ್ರೀ, ಕಾರಟಗಿ ತಹಶೀಲ್ದಾರ್‌ ಎಂ.ಬಸವರಾಜ, ತಾ.ಪಂ. ಇಒ ನರಸಪ್ಪ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಹಲವು ಕಾರ್ಯಕ್ರಮ: ಆರೋಗ್ಯ ತಪಾಸಣೆ, ಕೋವಿಡ್ ಲಸಿಕೆ ಹಾಕುವುದು, ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ, ಇಬ್ಬರು ಫಲಾನುಭವಿಗಳಿಗೆ ಶ್ರವಣ ಯಂತ್ರ ಮತ್ತು ಊರುಗೋಲು ವಿತರಣೆ, 154 ಜನರ ಆರೋಗ್ಯ ತಪಾಸಣೆ, 124 ಜನರಿಗೆ ಆರೋಗ್ಯ ಕಾರ್ಡ್‌ ವಿತರಣೆ, 3 ವಿಕಲಚೇತನರಿಗೆ ನರೇಗಾ ಉದ್ಯೋಗ ಚೀಟಿ ವಿತರಣೆ, ಗ್ರಾ.ಪಂ. ಜಾಬ್ ಕಾರ್ಡ್‌ ವಿತರಣೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಶೀಲನೆ: ಜಿಲ್ಲಾಧಿಕಾರಿ ಗ್ರಾಮದ ಹತ್ತಿರದ ಬರಗೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 205, 206 ಮತಗಟ್ಟೆ ಭೇಟಿ ನೀಡಿ ಅಗತ್ಯ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಸಾರ್ವಜನಿಕರಿಂದ 181 ಅಹವಾಲು ಸ್ವೀಕರಿಸಿ, 103 ಅರ್ಜಿ ಗಳಿಗೆ ಸ್ಥಳದಲ್ಲೇ ಪರಿಹಾರ ಲಭಿಸಿತು. ಉಳಿದ ಅರ್ಜಿಗಳನ್ನು ತುರ್ತಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.

ಬಳಿಕ ಜಿಲ್ಲಾಧಿಕಾರಿ ವಿವಿಧ ಯೋಜನೆಗಳ ವಿವಿಧ ಇಲಾಖೆಗಳ ಮಾಹಿತಿಯ ಪ್ರದರ್ಶನ ಮಳಿಗೆಗಳ ಆರಂಭಕ್ಕೆ ಚಾಲನೆ ನೀಡಿ, ಬಳಿಕ ಭೇಟಿ ನೀಡಿ, ಮಾಹಿತಿ ಪಡೆದರು. ಮುಖ್ಯಶಿಕ್ಷಕ ಅನ್ನದಾನಪ್ಪ ಪೂಜಾರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ ಮತದಾನದ ಬಗ್ಗೆ ಅರಿವು ಮೂಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು