ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು

7

ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು

Published:
Updated:

ಕೊಪ್ಪಳ: ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಹಳ್ಳದಲ್ಲಿ ಈಜುಲು ತೆರಳಿದ್ದ ಇಬ್ಬರು ಬಾಲಕರು ಮುಳುಗಿ ಸಾವಿಗೀಡಾದ ಘಟನೆ ಬುಧವಾರ ನಡೆದಿದೆ.

ಮೃತ ಬಾಲಕರನ್ನು ಬಸವರಾಜ ಈರಪ್ಪ ಗುಡೇರ (12), ನಾಗರಾಜ ಸಂಗಪ್ಪ ಕುಳ್ಳಳ್ಳಿ (14) ಎಂದು ಗುರುತಿಸಲಾಗಿದೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮೃತ ಬಾಲಕರ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಹಳ್ಳದಲ್ಲಿ ಆಳವಾದ ನೀರು ನಿಂತಿದ್ದರಿಂದ ಈಜು ಬಾರದೇ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !