ಶುಕ್ರವಾರ, ಜೂನ್ 25, 2021
21 °C

ತಾವರಗೇರಾ: 50 ಬೈಕ್‌ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ‘ಪಟ್ಟಣದಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದವರ 50 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪಿಎಸ್‌ಐ ಗೀತಾಂಜಲಿ ಶಿಂಧೆ ತಿಳಿಸಿದರು.

‘ಪ್ರತಿದಿನ ನಮ್ಮ ಸಿಬ್ಬಂದಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಅನಗತ್ಯವಾಗಿ ತಿರುಗಾಡುವವರ ಬೈಕ್ ಜಪ್ತಿ ಮಾಡಲಾಗುತ್ತಿದೆ. ದಂಡ ವಸೂಲಿ ವಿಧಿಸಲಾಗುತ್ತಿದೆ. ಅನಾವಶ್ಯಕವಾಗಿ ಹೊರಗೆ ಬರಬೇಡಿ. ಮಾರ್ಗಸೂಚಿ ಪಾಲಿಸಿ ಎಂದು ತಿಳಿ ಹೇಳಲಾಗುತ್ತಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಟ್ಟಣದಲ್ಲಿ ಕಿರಾಣಿ ಅಂಗಡಿ ಸೇರಿದಂತೆ ಇನ್ನಿತರ ಅಂಗಡಿ ಮುಂಗ್ಗಟ್ಟುಗಳನ್ನು ಸರಿಯಾಗಿ 10 ಗಂಟೆ ಒಳಗೆ ಬಂದ್ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ವರ್ತಕರು ಸೇರಿದಂತೆ ಎಲ್ಲ ಅಂಗಡಿ, ಹೋಟೆಲ್ ಮಾಲೀಕರು ಸಹಕಾರ ನೀಡುತ್ತಿದ್ದಾರೆ. ಸಾರ್ವಜನಿಕರು ಜಾಗೃತಿ ವಹಿಸಬೇಕು. ಪೊಲೀಸರಿಗೆ ಸಹಕಾರ ನೀಡಬೇಕು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು