‘ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸುತ್ತಿವೆ. ಇದು ಸಿಬಿಐಗೆ ವಹಿಸುವಷ್ಟು ಅರ್ಹವಾಗಿಲ್ಲ. ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದ್ದು, ಅವರು ಪರಿಣಾಮಕಾರಿಯಾಗಿ ತನಿಖೆ ಮಾಡುತ್ತಾರೆ. ಅಧಿಕಾರದಲ್ಲಿದ್ದಾಗ ಸಿಐಡಿ ಸಮರ್ಥವಾಗಿದೆ ಎಂದು ಬಿಜೆಪಿಯವರೇ ಹೇಳಿದ್ದರು. ವಿರೋಧ ಪಕ್ಷದ ಸ್ಥಾನಕ್ಕೆ ಬಂದಾಕ್ಷಣ ಸಿಐಡಿ ದುರ್ಬಲವಾಯಿತೇ’ ಎಂದು ಪ್ರಶ್ನಿಸಿದರು.