ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ

7
ಕೇಂದ್ರೀಯ ವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗೆ ಸಂಸದ ಕರಡಿ ಸಂಗಣ್ಣ ಚಾಲನೆ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ

Published:
Updated:
Deccan Herald

ಗಂಗಾವತಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಗರಿಷ್ಠ ಪ್ರಮಾಣದಲ್ಲಿ ದಕ್ಕಿಸಿಕೊಳ್ಳುವ ಮೂಲಕ ಕೊಪ್ಪಳ ಜಿಲ್ಲೆ ಇಡೀ ರಾಜ್ಯದಲ್ಲಿ ಹೆದ್ದಾರಿ ಜಿಲ್ಲೆ ಎಂಬ ಖ್ಯಾತಿಗೆ ಪಾತ್ರವಾಗಿದೆ ಎಂದು ಕೋಪ್ಪಳ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಹೇಳಿದರು.

ನಗರದ ಎಂಎನ್ಎಂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ಕೇಂದ್ರೀಯ ವಿದ್ಯಾಲಯದ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘163 ಕಿ.ಮೀ. ಉದ್ದದ ಗಿಣಿಗೇರಾ- ರಾಯಚೂರು ಮಾರ್ಗ ರಾಷ್ಟ್ರೀಯ ಹೆದ್ದಾರಿಯಾಗಿ ಅನುಮೋದನೆ ಪಡೆದುಕೊಂಡಿದೆ.  ಶೀಘ್ರ ಅನುಷ್ಠಾನ ಕಾರ್ಯಕ್ಕೆ ಚಾಲನೆ ಸಿಗಲಿದೆ. ಶ್ರೀರಾಮನಗರ, ಕಾರಟಗಿ, ಸಿದ್ದಾಪುರ, ಸಿಂಧನೂರು, ಜವಳಗೇರಾಕ್ಕೆ ಬೈಪಾಸ್ ರಸ್ತೆ ಸಿಗಲಿದೆ. ಅಲ್ಲದೇ ಕೊಪ್ಪಳ- ಮೆತಗಲ್ ಮಧ್ಯೆದ ರಸ್ತೆಯೂ ಬೈಪಾಸ್ ಆಗಿ ಪರಿವರ್ತನೆಯಾಗಲಿದೆ. ಹೀಗಾಗಿ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಇವೆ’ ಎಂದು ಮಾಹಿತಿ ನೀಡಿದರು.

 ಡಿಸೆಂಬರ್ ಅಂತ್ಯಕ್ಕೆ ಗಂಗಾವತಿ ವರೆಗೂ ರೈಲು ಓಡಿಸುವ ಗುರಿ ಇದೆ. ಗಂಗಾವತಿ ಬೆಂಗಳೂರು ಮಾರ್ಗದಲ್ಲಿ ರೈಲು ಓಡಿಸುವಂತೆ ಜನರಿಂದ ಬೇಡಿಕೆ ಇದೆ. ಈ ಬಗ್ಗೆ ಜಿಲ್ಲಾಧಿಕಾರಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ, ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದ ಯಾವುದೇ ವಿಷಯವಿದ್ದರೂ ಚುನಾಯಿತರು ಮಾಹಿತಿ ನೀಡಿದರೆ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.

ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ರಾಮಸ್ವಾಮಿ, ಶಾಸಕ ಪರಣ್ಣ ಮುನವಳ್ಳಿ ಮಾತನಾಡಿದರು.

ಎಂಎನ್ಎಂ ಕಾಲೇಜಿನ ಪ್ರಾಂಶುಪಾಲ ಶಾಂತಪ್ಪ, ಮಾಜಿ ಶಾಸಕ ಜಿ. ವೀರಪ್ಪ, ಮುಖಂಡರಾದ ಕೆ. ಕಾಳಪ್ಪ, ಜೆ.ಎಚ್.ಎಂ. ತಿಪ್ಪೇರುದ್ರಸ್ವಾಮಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !