ಸೋಮವಾರ, ಡಿಸೆಂಬರ್ 5, 2022
21 °C

ಸಾವಿನಲ್ಲೂ ಒಂದಾದ ದಂಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ: ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಬುಧವಾರ ಸಾವಿನಲ್ಲೂ ದಂಪತಿ ಒಂದಾದ ಘಟನೆ ನಡೆದಿದೆ.

ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಪತ್ನಿ ಹೊನ್ನಮ್ಮ ತಳವಾರ (65) ಮಧ್ಯಾಹ್ನ ಮೃತಪಟ್ಟಿದ್ದರು. ಮೊದಲೇ ಅನಾರೋಗ್ಯ, ಕಾಲಿನ ಸಮಸ್ಯೆಯಿಂದ ತೊಂದರೆಗೆ ಒಳಗಾಗಿದ್ದ ಪತಿ ಶಿವಪ್ಪ ಫಕೀರಪ್ಪ ತಳವಾರ (70) ಪತ್ನಿ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ರಾತ್ರಿ 9.30ರ ವೇಳೆಗೆ ಮೃತಪಟ್ಟರು ಎಂದು ಗ್ರಾಮಸ್ಥರು ತಿಳಿಸಿದರು.

ಈ ಘಟನೆಯಿಂದ ಊರಿನ ಜನ ಮುಮ್ಮಲ ಮರಗಿದ್ದು ದಂಪತಿ ಸಾವಿಗೆ ಕಂಬನಿ ಮಿಡಿದಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಗ್ರಾಮದ ಹೊರವಲಯದಲ್ಲಿ ನಡೆಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.