ಸೋಮವಾರ, ಜೂನ್ 27, 2022
24 °C
ಮೃತ ಯುವಕನನ್ನು ರಾಜಾಸಾಬ್ (25)  ಎಂದು ಗುರುತಿಸಲಾಗಿದೆ.

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ‌ ಮರಳು ಗುಂಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಭಾನುವಾರ ನಡೆದಿದ್ದು, ಸೋಮವಾರ ದೇಹ ಪತ್ತೆಯಾಗಿದೆ.

ಗ್ರಾಮದ ನದಿಯ ಸೇತುವೆಯ ಕೆಳಗಿನಿಂದ ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಗಂಗಾವತಿಯ 7ನೇ ವಾರ್ಡಿನ ಮೆಹಿಬೂಬ್ ನಗರದ ನಿವಾಸಿ ರಾಜಾಸಾಬ್ (25)  ಎಂದು ಗುರುತಿಸಲಾಗಿದೆ.

ಇಬ್ಬರು ಸ್ನೇಹಿತರ ಜೊತೆ ಸ್ನಾನಕ್ಕೆ ಹೋಗಿದ್ದ. ಇನ್ನೊಬ್ಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಯಾಸದಿಂದ ಈಜಿ ದಡ ಸೇರಿದ್ದಾರೆ.  ಮಗನನ್ನು ಕಳೆದುಕೊಂಡ ತಾಯಿ ಮತ್ತು ಅವರ ಸಹೋದರಿಯರ ಆಂಕ್ರದನ ಮುಗಿಲು ಮುಟ್ಟಿತ್ತು. 

ಗ್ರಾಮಸ್ಥರ ಆಕ್ರೋಶ: ಇಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಬೇಕಾಬಿಟ್ಟಿಯಾಗಿ ಗುಂಡಿಗಳನ್ನು ತೋಡಿ ಬಿಡುವುದರಿಂದ ಪ್ರತಿವರ್ಷ ಹತ್ತಾರು ಜನರು ಬಲಿಯಾಗುತ್ತಿದ್ದಾರೆ. ಈ ಕುರಿತು ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು