ಕೊಪ್ಪಳ: ‘ಸಂತ ಕವಿ ಎನಿಸಿದ ಸರ್ವಜ್ಞರ ವಚನಗಳು ಜೀವನದ ಆದರ್ಶ, ಮೌಲ್ಯಗಳನ್ನು ಒಳಗೊಂಡಿದ್ದು, ಅವುಗಳನ್ನು ಅಧ್ಯಯನ ಮಾಡಬೇಕು. ನಾವೆಲ್ಲರೂ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸರ್ವಜ್ಞರು ಸಮಾಜಕ್ಕೆ ತಮ್ಮ ತ್ರಿಪದಿಗಳ ಮೂಲಕ ಅಮೋಘ ಕೊಡುಗೆ ನೀಡಿದ್ದಾರೆ. ಜಾತಿ ರಹಿತ, ಕಾಯಕ ಶ್ರದ್ಧೆ, ಶಿಕ್ಷಣ, ಸಂಬಂಧಗಳ ಮೌಲ್ಯಗಳನ್ನು ತಿಳಿಸಿಕೊಟ್ಟಿದ್ದಾರೆ’ ಎಂದರು.

ಗವಿಸಿದ್ದೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಸಿದ್ದಲಿಂಗಪ್ಪ ಕೊಟ್ನೇಕಲ್ ಮಾತನಾಡಿ, ‘ಸರ್ವಜ್ಞರು 16ನೇ ಶತಮಾನದವರಾಗಿದ್ದರೂ ಅವರ ವಚನಗಳು ಪ್ರಸ್ತುತ ಎನಿಸಿವೆ. ಅಂದಿನ ಕಾಲದಲ್ಲೇ ಮುಂದಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಬೆಳೆಯುವ ಪರಿಯನ್ನು ಊಹಿಸಿದ್ದರು. ತಮ್ಮ ವಚನಗಳಲ್ಲಿ ರೈಲ್ವೆ ಹಾಗೂ ದೂರವಾಣಿ ಬಗ್ಗೆ ಉಲ್ಲೇಖಿಸಿದ್ದರು’ ಎಂದು ಹೇಳಿದರು.

‘ವಿಶ್ವವಿದ್ಯಾಲಯಗಳ ಅಧ್ಯಯನ ಪೀಠಗಳಲ್ಲಿ ಸರ್ವಜ್ಞರ ಕುರಿತು ಹೆಚ್ಚಿನ ಅಧ್ಯಯನಕ್ಕೆ ಒತ್ತು ನೀಡಬೇಕು. ಇನ್ನಷ್ಟು ಅಧ್ಯಯನದ ಮೂಲಕ ಸರ್ವಜ್ಞರ ವಚನಗಳನ್ನು ಬೆಳಕಿಗೆ, ದಿನ ನಿತ್ಯದ ಬಳಕೆಗೆ ತರಬೇಕು. ವಿದ್ಯಾರ್ಥಿಗಳಲ್ಲಿ ವಚನಗಳ ಅಧ್ಯಯನದ ಬಗ್ಗೆ ಆಸಕ್ತಿ ಹೆಚ್ಚಿಸಬೇಕು. ಬದುಕಿನ ಮೌಲ್ಯಗಳನ್ನು ತಿಳಿಸುವ ಶರಣರ, ಸಂತರ ವಚನಗಳು ನಮ್ಮ ದಿನನಿತ್ಯದ ಜೀವನದ ಭಾಗವಾಗಬೇಕು’ ಎಂದು ಅಭಿಪ್ರಾಯಪಟ್ಟರು.

ಸಮಾಜದ ಮುಖಂಡರಾದ ದೇವಿಕಾ ಕುಂಬಾರ, ಶಾಂತಿನಿಕೇತನ ಶಾಲೆಯ ಅಧ್ಯಕ್ಷ ಶಿವಕುಮಾರ ಕುಕನೂರ, ಸುರೇಶ ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮಾಜದ ಜಿಲ್ಲಾ ಅಧ್ಯಕ್ಷ ಕಳಕಪ್ಪ ಕುಂಬಾರ, ತಾಲ್ಲೂಕು ಕುಂಬಾರ ಸಂಘದ ಅಧ್ಯಕ್ಷ ಅಂದಪ್ಪ ಕುಂಬಾರ, ಗುರುರಾಜ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.