ಶನಿವಾರ, ಮಾರ್ಚ್ 6, 2021
28 °C

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ: ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಗಂಗಾವತಿ: ‘ಕೋವಿಡ್‌ ನಂತರ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿವೆ. ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದು ಆಗ್ರಹಿಸಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ ನಡೆಸಿತು.

ಎಬಿವಿಪಿಯ ಜಿಲ್ಲಾ ಸಂಚಾಲಕ ಸರ್ವಜ್ಞಮೂರ್ತಿ ಮಾತನಾಡಿ,‘ಶಾಲಾ-ಕಾಲೇಜುಗಳು ಶುರುವಾಗಿ ಮತ್ತೆ ಶೈಕ್ಷಣಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರುತ್ತಿದ್ದರೂ, ಉಪನ್ಯಾಸಕರ ಕೊರತೆಯಿಂದ ತರಗತಿಗಳು ನಡೆಯುತ್ತಿಲ್ಲ. ಹಾಗಾಗಿ ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ಹೊರಡಿಸಬೇಕು’ ಎಂದರು.

ವಿದ್ಯಾರ್ಥಿ ವೇತನ ಸಿಗದೆ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು. ಇನ್ನು ಗ್ರಾಮೀಣ ಭಾಗದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಆರಂಭಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಕಾರ್ಯಕರ್ತರಾದ ಶಿವನಗೌಡ, ಉಮೇಶ, ಅಯ್ಯನಗೌಡ, ಕೌಸ್ತುಬ್ ದಂಡಿನ್ ಹಾಗೂ ವಿಕಾಸ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು