ಗಂಗಾವತಿ: ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ತಹಶೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸರ್ವಜ್ಞಮೂರ್ತಿ ಮಾತನಾಡಿ,‘2018 ರ ಆತ್ಮಹತ್ಯೆ ಪ್ರಕರಣ ಅಂತ್ಯ ಕಂಡಿತ್ತು. ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಆ ಪ್ರಕರಣದ ಮರು ತನಿಖೆ ಆರಂಭಿಸಿದೆ. ಮಹಾರಾಷ್ಟ್ರ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಬಯಲು ಮಾಡಿಕೊಂಡಿದೆ’ ಎಂದರು.

ಅರ್ನಬ್ ಗೋಸ್ವಾಮಿ ಬಂಧನದ ವೇಳೆ ಪೊಲೀಸರು ನಡೆದುಕೊಂಡ ರೀತಿ ತುರ್ತು ಪರಿಸ್ಥಿಯ ದಿನಗಳನ್ನು ನೆನಪಿಸುತ್ತದೆ. ತಕ್ಷಣ ಅರ್ನಬ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಎಬಿವಿಪಿ ಕಾರ್ಯಕರ್ತರಾದ ಲಕ್ಷ್ಮೀ ಬೋಸ್ಲೆ, ಶ್ರೀನಿವಾಸ, ಮಹಾರಾಜ ಹಾಗೂ ಉಮೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.