ತಾವರಗೇರಾ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ( ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಭೇಟಿ ನೀಡಿದರು.

ಈ ವೇಳೆ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮಾತನಾಡಿ,‘ಈ ಕುರಿತು ಶಾಸಕರು ಹಾಗೂ ನಾವು ಇಲಾಖೆ ಜತೆಗೆ ಚರ್ಚಿಸಿ, ಪರಿಶೀಲಿಸಿ ಕ್ರಮ ಕೊಳ್ಳುತ್ತೇವೆ’ ಎಂದು ತಿಳಿಸಿದರು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಸಂಸದ ಸಂಗಣ್ಣ ಕರಡಿ, ಜಲ ಮಂಡಳಿ ಅಧ್ಯಕ್ಷ ರಾಜೂಗೌಡ , ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಕಾರ್ಯಕಾರಣಿ ಸದಸ್ಯ ನಾಗರಾಜ ಗುಡದೂರು, ಜಿಲ್ಲಾ ಸಂಚಾಲಕ ಸರ್ವಜ್ಞಮೂರ್ತಿ, ನಗರ ಘಟಕದ ಸಹ ಕಾರ್ಯದರ್ಶಿ ಮೌನೇಶ್ ಬಡಿಗೇರ್. ಪುಟ್ಟರಾಜ, ನಗರ ಕಾರ್ಯಕಾರಿಣಿ ಸದಸ್ಯರಾದ ಬಸವರಾಜ ಅಂಬರೀಶ್ , ಶ್ರೀಧರ ದಂಡಿನ್, ಮಲ್ಲಿಕಾರ್ಜುನ್, ಪ್ರವೀಣ್, ಮಲ್ಲಮ್ಮ ಹಾಗೂ ಶ್ರೀದೇವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.