ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಸಮಸ್ಯೆ ಪರಿಹರಿಸಲು ಆಗ್ರಹ; ವಿದ್ಯಾರ್ಥಿಗಳ ಪ್ರತಿಭಟನೆ

Published 10 ಆಗಸ್ಟ್ 2023, 8:45 IST
Last Updated 10 ಆಗಸ್ಟ್ 2023, 8:45 IST
ಅಕ್ಷರ ಗಾತ್ರ

ಕೊಪ್ಪಳ: ರಾಜ್ಯದ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ‌ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲೆ ಅವರಿಗೆ ‌ಮನವಿ ಸಲ್ಲಿಸಿದ ವಿದ್ಯಾರ್ಥಿಗಳು ರಾಜ್ಯದ ವಿ.ವಿ.ಗಳಿಗೆ ಸರ್ಕಾರ ಸಕಾಲದಲ್ಲಿ ಅನುದಾನ ಬಿಡುಗಡೆ ‌ಮಾಡದ ಕಾರಣ ಅದರ ಪರಿಣಾಮ ವಿದ್ಯಾರ್ಥಿಗಳ ‌ಮೇಲಾಗುತ್ತಿದೆ. ಇದರಿಂದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರು.

ಪರೀಕ್ಷೆ ಮುಗಿದ ಮೇಲೆ ನಿಗದಿತ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಬೇಕು. ವಿ.ವಿ.ಗಳಲ್ಲಿ ಕಾಯಂ ಪ್ರಾಧ್ಯಾಪಕರ ಕೊರತೆ ಇದ್ದು, ಇದನ್ನು ಸರಿಪಡಿಸಬೇಕು, ವಿ.ವಿ.ಗಳಿಗೆ ಮೂಲ ಸೌಕರ್ಯ, ಬೋಧಕೇತರ ಸಿಬ್ಬಂದಿ, ಹಾಸ್ಟೆಲ್ ಅವ್ಯವಸ್ಥೆ ಸರಿಪಡಿಸಬೇಕು ಹಾಗೂ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್ ಆಗ್ರಹಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ತಹಶೀಲ್ದಾರ್ ಕಚೇರಿ ತನಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT