ಗುರುವಾರ , ಮಾರ್ಚ್ 23, 2023
30 °C
ಜಲ ಜೀವನ್ ಮಿಷನ್‌ ಅನುಷ್ಠಾನ: ಪ್ರಗತಿ ಪರಿಶೀಲನಾ ಸಭೆ

ಕಾಮಗಾರಿ ಕಳಪೆಯಾದರೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಪಟ್ಟಣದ ಯಾತ್ರಿ ನಿವಾಸದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ಕಾವ್ಯರಾಣಿ ಅಧ್ಯಕ್ಷತೆ ವಹಿಸಿದ್ದರು.

ಗಂಗಾವತಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಮಾತನಾಡಿ,‘ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನೀರಿನ ಸೌಕರ್ಯ ಒದಗಿಸುವುದು ಯೋಜನೆಯ ಗುರಿಯಾಗಿದೆ’ ಎಂದು ತಿಳಿಸಿದರು.

ಕಾಮಗಾರಿ ಮೇಲೆ ಅಧಿಕಾರಿಗಳು ನಿಗಾವಹಿಸಬೇಕು. ಗುಣಮಟ್ಟ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಎಂಜಿನಿಯರ್ ಚಿದಾನಂದ ಮಾತನಾಡಿ,‘ತಾಲ್ಲೂಕಿನ 56 ಹಳ್ಳಿಗಳಲ್ಲಿ ಮೊದಲ ಹಂತದಲ್ಲಿ ಜೆಜೆಎಂ ಕಾಮಗಾರಿ ಆರಂಭಿಸಲಾಗುತ್ತಿದೆ. ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ಕ್ರಿಯಾಯೋಜನೆ ತಯಾರಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು. ಮುಂಬರುವ ದಿನಗಳಲ್ಲಿ ಎಲ್ಲ ಗ್ರಾಮಗಳಿಗಳೂ ಯೋಜನೆ ವಿಸ್ತಾರವಾಗಲಿದೆ‘ ಎಂದು ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ಕಾವ್ಯಾರಾಣಿ ಮಾತನಾಡಿ,‘ನಲ್ಲಿ ಸಂಪರ್ಕ ನೀಡಲು ಗುತ್ತಿಗೆದಾರರು ಬಳಸುವ ಪೈಪ್‌ಗಳು ಹಾಗೂ ಇತರೆ ಸಾಮಗ್ರಿಗಳ ಗುಣಮಟ್ಟದ ಕುರಿತು ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು, ಪಿಡಿಒಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರ ಸಮನ್ವಯತೆಯೊಂದಿಗೆ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.

ಎಂಜಿನಿಯರ್ ಧನರಾಜ, ತಾ.ಪಂ. ಯೋಜನಾ ನಿರ್ದೇಶಕ ಕೆ.ರಾಜಶೇಖರ, ಸಹಾಯಕ ನಿರ್ದೇಶಕ ವೀರಣ್ಣ ನಕ್ರಳ್ಳಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.