ಈಗಾಗಲೇ ಆರಂಭವಾಗಿರುವ ಸಂವಿಧಾನ ಜಾಗೃತಿ ಜಾಥಾ ಫೆ. 23ರ ವರೆಗೆ ಜಿಲ್ಲೆಯಲ್ಲಿ ನಡೆಯಲಿದ್ದು, ನಿಗದಿತ ಮಾರ್ಗದಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿ ಯೋಜನೆಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.