ಸೋಮವಾರ, ಜನವರಿ 17, 2022
21 °C
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ ಸಲಹೆ

ಕೊಪ್ಪಳ | ‘ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳವಂಡಿ: ‘ಮಕ್ಕಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಶಿಕ್ಷಣ ಪಡೆಯಬೇಕು. ಎಲ್ಲ ಸರ್ಕಾರಿ ಶಾಲೆಗಳಲ್ಲೂ ಸ್ಮಾರ್ಟ್‌ಕ್ಲಾಸ್‌ ವ್ಯವಸ್ಥೆ ಮಾಡಬೇಕು. ಆ ಮೂಲಕ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಾಗಬೇಕು’ ಎಂದು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ ಹೇಳಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಮೈನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಮಾರ್ಟ್‌ಕ್ಲಾಸ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ,‘ಮಕ್ಕಳು ಸಹ ಚೆನ್ನಾಗಿ ಓದಿ ಸಾಧನೆ ಮಾಡಬೇಕು’ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನಿರ್ದೇಶಕ ವಿ.ಎಂ.ಭೂಸನೂರಮಠ ಮಾತನಾಡಿ ಸ್ಮಾರ್ಟ್‌ಕ್ಲಾಸ್‌ನ ಅನುಕೂಲಗಳ ಕುರಿತು ವಿವರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಕ್ರಡ್ಡಿ ಹ್ಯಾಟಿ, ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಎಲ್.ಹಿರೇಗೌಡ್ರ, ಎಸ್‌ಡಿಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಪೂಜಾರ, ಸಂಯೋಜಕ ಶರಣಪ್ಪ ಶಿಂದೋಗಿ, ವಿನೂತನ ಶಿಕ್ಷಣ ಸೇವಾ ಸಂಸ್ಥೆ ಅಧ್ಯಕ್ಷ ಸಿದ್ದಲಿಂಗಯ್ಯ ಹಿರೇಮಠ, ರೋಟರಿ ಕ್ಲಬ್ ಅಧ್ಯಕ್ಷ ಅಮರೇಶ ಪಾಟೀಲ, ಯೋಜನಾ ನಿರ್ದೇಶಕಿ ಕವಿತಾ ಹಿರೇಮಠ, ಗ್ರಾ.ಪಂ ಸದಸ್ಯರಾದ ಮರಿಶಾಂತವೀರ ಚಕ್ಕಡಿ, ಈರಣ್ಣ ಮೂಲಿಮನಿ, ಸುಶಿಲಮ್ಮ ಕೊಪ್ಪಳ, ಹನುಮವ್ವ ಪೂಜಾರ, ಎಸ್‌ಡಿಎಂಸಿ ಸದಸ್ಯರಾದ ಮಹೇಂದ್ರಗೌಡ ಕುರುಡಗಿ, ನಾಗರೆಡ್ಡಿ ಡಂಬ್ರಳ್ಳಿ, ಉಮೇಶ್ ಗುಡದಣ್ಣವರ, ಈರಮ್ಮ ಕುಂಬಾರ, ರೇಣುಕಾ ಕತ್ತಿ, ಸಿದ್ದರೆಡ್ಡಿ ಡಂಬ್ರಳ್ಳಿ, ಪ್ರಭುಗೌಡ ಮೈನಹಳ್ಳಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.