ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿಣಿಗೇರಾ ಕೆರೆಗೆ ಸಚಿವ ಬಿ.ಸಿ.ಪಾಟೀಲ್ ಭೇಟಿ: ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ

Last Updated 16 ಏಪ್ರಿಲ್ 2021, 6:32 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಶುಕ್ರವಾರ ತಾಲ್ಲೂಕಿನ ಗಿಣಿಗೇರಾ ಗ್ರಾಮದ ಕೆರೆಗೆ ಭೇಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದರು.

ಬಳಿಕ ಗಿಣಿಗೇರಾದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ₹54 ಕೋಟಿ ವೆಚ್ಚದಲ್ಲಿ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು. ನಿರಂತರ ಮತ್ತು ಶುದ್ಧ ಕುಡಿಯುವ ನೀರು ಪೂರೈಕೆಗೆ ಯೋಜನೆ ರೂಪಿಸಲಾಗುವುದು. ನೆನೆಗುದಿಗೆ ಬಿದ್ದಿರುವ ಕಾಸನಕಂಡಿ ಏತ ನೀರಾವರಿ ಯೋಜನೆಗೆ ಅವಶ್ಯಕ ಇರುವ ಅನುದಾನ ನೀಡಲಾಗುತ್ತಿದೆ. ಕೆಲವು ತಾಂತ್ರಿಕ ಕಾರಣ ಪರಿಹರಿಸಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿ.ಪಂ. ಸದಸ್ಯರಾದ ಗವಿಸಿದ್ದಪ್ಪ ಕರಡಿ ಹಾಗೂ ರಾಮಣ್ಣ ಚೌಡ್ಕಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ ಸುರಳ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT