ಅಳವಂಡಿ: ಸಮೀಪದ ಗುಡ್ಲಾನೂರು ಗ್ರಾಮದಲ್ಲಿ ನಿರ್ವಹಣೆ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ.

ಕಾತರಕಿ-ಗುಡ್ಲಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗುಡ್ಲಾನೂರು ಗ್ರಾಮದಲ್ಲಿ ಜನಸಂಖ್ಯೆ ಅನುಗುಣವಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿದೆ. ಆದರೆ, ಹಲವು ತಿಂಗಳಿಂದ ಘಟಕ ಸ್ಥಗಿತಗೊಂಡಿದೆ. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಕಾತರಕಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕವನ್ನು ಅವಲಂಬಿಸಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯಲಿ ಎನ್ನುವ ಸದುದ್ದೇಶದಿಂದ ಸರ್ಕಾರ ಗ್ರಾಮಗಳಲ್ಲಿ ಲಕ್ಷಾಂತರ ರೂಪಾಯಿ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ. ಆದರೆ ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಹಾಗೂ ನಿರ್ವಹಣೆ ಕೊರತೆಯಿಂದ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿದೆ.

ಬೇಸಿಗೆಯ ಪ್ರಖರ ಬಿಸಿಲಿನಲ್ಲಿ, ಜನರ ನೀರಿನ ದಾಹ ತಣಿಸಬೇಕಿದ್ದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು. ಜನರು ಶುದ್ಧ ನೀರಿಗಾಗಿ ಅಲೆದಾಡುವಂತಾಗಿದೆ. ಗ್ರಾಮಸ್ಥರು ಬೇರೆ ಗ್ರಾಮಕ್ಕೆ ಹೋಗಿ ನೀರು ತುಂಬಿಸಿಕೊಂಡು ಬರುವ ಸ್ಥಿತಿ ಬಂದೊದಗಿದೆ.

‘ಸರ್ಕಾರ, ಜಿಲ್ಲಾಡಳಿತ ಬೇಸಿಗೆಯಲ್ಲಿ ಜನರಿಗೆ ಶುದ್ಧ ನೀರು ಒದಗಿಸಲು ಹಲವು ಕ್ರಮ ಕೈಗೊಂಡಿದೆ. ಆದರೆ ಗುಡ್ಲಾನೂರದಲ್ಲಿ ಮರೀಚಿಕೆ ಯಾಗಿದೆ. ಜಿಲ್ಲಾಡಳಿತ ಶೀಘ್ರ ನಮ್ಮ ಗ್ರಾಮದತ್ತ ಗಮನಹರಿಸಿ ಶುದ್ಧ ನೀರಿನ ಘಟಕ ಪ್ರಾರಂಭಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು’ ಎಂದು ಗ್ರಾಮಸ್ಥ ರವಿಕುಮಾರ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-35-1739896168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.