ಅಳವಂಡಿ: ಸಮೀಪದ ಹಿರೇಹಳ್ಳದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಅಳವಂಡಿ ಠಾಣೆಯ ಪಿಎಸ್ಐ ಪ್ರಲ್ಹಾದ ನಾಯ್ಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಾಗರಾಜ, ಸಹಾಯಕ ಎಂಜಿನಿಯರ್ ನವೀನ್ ಕುಮಾರ್ ಹಿರೇಹಳ್ಳ ಭಾಗದಲ್ಲಿ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು. ಬಳಿಕ ನೀಡಿದ ಹೇಳಿಕೆಯಲ್ಲಿ ‘ಹಿರೇಹಳ್ಳದ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಮರಳು ಗಣಿಗಾರಿಕೆ ಅಥವಾ ಸಾಗಾಣಿಕೆ ಚಟುವಟಿಕೆಗಳು ಕಂಡುಬಂದಿರುವುದಿಲ್ಲ’ ಎಂದು ತಿಳಿಸಿದರು.

ಈ ಕುರಿತು ಎರಡು ದಿನಗಳ ಹಿಂದೆ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದರು. ಅಕ್ರಮದಲ್ಲಿ ಪೊಲೀಸರು ಕೂಡ ಭಾಗಿಯಾಗಿದ್ದಾರೆ ಎಂದು ದೂರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.