ಬುಧವಾರ, ಜೂನ್ 29, 2022
27 °C

ಬೆಳೆ ವೈವಿಧ್ಯತೆ ಅನುಸರಿಸಿ: ಶಾಸಕ ಅಮರೇಗೌಡ ಬಯ್ಯಾಪುರ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ‘ಪ್ರತಿವರ್ಷ ಏಕ ಬೆಳೆ ಬೆಳೆಯುವ ಬದಲು ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ರೈತರು ಬೆಳೆ ವೈವಿಧ್ಯತೆ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಸಲಹೆ ನೀಡಿದರು.

ಶನಿವಾರ ಇಲ್ಲಿ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿನ ವಿವಿಧ ಬಿತ್ತನೆ ಬೀಜಗಳನ್ನು ಒಳಗೊಂಡ ಕಿರುಚೀಲಗಳನ್ನು ವಿತರಿಸಿ ಮಾತನಾಡಿದ ಅವರು,‘ಬಹುತೇಕ ರೈತರು ಪ್ರತಿವರ್ಷ ಮೆಕ್ಕೆಜೋಳ, ಸೂರ್ಯಕಾಂತಿ ಹೀಗೆ ಒಂದೇ ಬೆಳೆಯುತ್ತಿರುವುದು ಕಂಡುಬಂದಿದೆ. ಅಲ್ಲದೆ ಅವೈಜ್ಞಾನಿಕ ರೀತಿಯಲ್ಲಿ ರಾಸಾಯನಿಕ ಗೊಬ್ಬರ ಬಳಸುವುದೂ ಸರಿಯಲ್ಲ. ಹಿಂದೆ ನಮ್ಮ ರೈತರು ಅನುಸರಿಸುತ್ತಿದ್ದ ಸಾಂಪ್ರದಾಯಿಕ ಬೆಳೆ ಪದ್ಧತಿ ಭೂಮಿಯ ಆರೋಗ್ಯಕ್ಕೆ ಪೂರಕವಾಗುತ್ತಿತ್ತು’ ಎಂದರು.

ಅಲ್ಲದೆ ನ್ಯಾನೊ ಯೂರಿಯಾ ಬಳಕೆ ಬಗ್ಗೆ ರೈತರು ಕೃಷಿ ತಜ್ಞರಿಂದ ಮಾಹಿತಿ ಪಡೆಯಬೇಕು ಎಂದರು.

ಈ ವರ್ಷ ಮುಂಗಾರು ಹಂಗಾಮಿಗೆ ಬೇಕಾಗುವ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಿಸಲು ಕೃಷಿ ಇಲಾಖೆಗೆ ಸೂಚಿಸಿದ ಬಯ್ಯಾಪುರ, ಅಗತ್ಯ ಬೀಜಗಳನ್ನು ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿಕೊಳ್ಳಬೇಕು ಎಂದರು.

ನ್ಯಾನೊ ಯೂರಿಯಾ ಬಳಕೆ ಕುರಿತು ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ರೈತರಿಗೆ ಮಾಹಿತಿ ನೀಡಿದರು. ಕೃಷಿ ಇಲಾಖೆ ಸಿಬ್ಬಂದಿ, ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು