ಮಂಗಳವಾರ, ಮೇ 11, 2021
27 °C

ಕನಕಗಿರಿ: ವಿವಿಧೆಡೆ ಸಂವಿಧಾನ ಶಿಲ್ಪಿ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸರ್ಕಾರಿ ಕಚೇರಿ, ಶಾಲಾ–ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರವಿ ಅಂಗಡಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್, ಸದಸ್ಯ ಶರಣಬಸಪ್ಪ ಭತ್ತದ ಮಾತನಾಡಿದರು.

ಪಟ್ಟಣ ಪಂಚಾಯಿತಿ ಸದಸ್ಯ ಖಾಜಸಾಬ ಗುರಿಕಾರ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಯಂತಿಯಲ್ಲಿ ಬಿಸಿಸಿ ಅಧ್ಯಕ್ಷ ರೆಡ್ಡಿಶ್ರೀನಿವಾಸ, ಎಪಿಎಂಸಿ ಮಾಜಿ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರೇಶ ಸಮಗಂಡಿ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಶರಣಬಸಪ್ಪ ಭತ್ತದ ಮಾತನಾಡಿದರು.

ಪಟ್ಟಣ ಪಂಚಾಯಿತಿ ಸದಸ್ಯ ಮಂಜುನಾಥ ಗಡಾದ, ಪಾಷ ಮುಲ್ಲಾರ, ತಾಲ್ಲೂಕು ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನಗೌಡ, ಮಾಜಿ ಸದಸ್ಯ ನೂರಸಾಬ ಗಡ್ಡಿಗಾಲ, ಪ್ರಮುಖರಾದ ಕನಕದಾಸ ಪೂಜಾರ, ನಾಗೇಶ ಉಪ್ಪಾರ, ಕೆ.ಎಚ್. ಕುಲಕರ್ಣಿ, ಅನಿಲಕುಮಾರ ಬಿಜ್ಜಳ, ಪ್ರಶಾಂತ ಪ್ರಭುಶೆಟ್ಟರ್, ರಾಜಸಾಬ ನಂದಾಪುರ, ಶರಣೆಗೌಡ ಪಾಟೀಲ, ಟಿ. ಜೆ.ರಾಮಚಂದ್ರ, ರವಿಶಂಕರ ಪಾಟೀಲ, ಮೆಹಬೂಬ ಸುಳೇಕಲ್, ಬಾಲರಾಜ ಹಾಗೂ ವೆಂಕಟೇಶ ಗೋಡಿನಾಳ ಇದ್ದರು.

ಸಮೀಪದ ನವಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಜಯಂತಿ ಆಚರಿಸಲಾಯಿತು.

ಅಧ್ಯಕ್ಷ ಭೀಮನಗೌಡ ಹರ್ಲಾಪುರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗೇಶ ಗುಂಡದ, ಪ್ರಮುಖರಾದ ನಿಂಗಪ್ಪ ನಾಯಕ ಹಾಗೂ ಜಡಿಯಪ್ಪ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು