ಪಟ್ಟಣದಲ್ಲಿ ಸೋಮವಾರ ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋಮು ಗಲಭೆ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ರೂಪಿಸಿ ಇಂತಹ ಕೆಲಸ ಮಾಡಿದ್ದಾರೆ. ಪೊಲೀಸ್ ಇಲಾಖೆ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಿಗಾ ವಹಿಸಬೇಕು. ರಾಷ್ಟ್ರೀಯ ನಾಯಕರ ಮೂರ್ತಿ ಹಾಗೂ ವೃತ್ತಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.