ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್‌ ಕಸಿದುಕೊಂಡ ಅಂಗನವಾಡಿ ಕಾರ್ಯಕರ್ತೆ,ಸಹಾಯಕಿ!

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರಲ್ಲಿ ಘಟನೆ: ಸೇವೆಯಿಂದ (ಗೌರವಧನದ ಸೇವೆ) ಅಮಾನತು
Published : 10 ಆಗಸ್ಟ್ 2024, 7:34 IST
Last Updated : 10 ಆಗಸ್ಟ್ 2024, 7:34 IST
ಫಾಲೋ ಮಾಡಿ
Comments

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್‌ ಕಸಿದುಕೊಂಡ ಆರೋಪದ ಮೇಲೆ ಅಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸೇವೆಯಿಂದ (ಗೌರವಧನದ ಸೇವೆ) ಅಮಾನತು ಮಾಡಲಾಗಿದೆ.

ಮಧ್ಯಾಹ್ನದ ಊಟಕ್ಕೆ ಕುಳಿತಿದ್ದ ಮಕ್ಕಳ ತಟ್ಟೆಗೆ ಅಂಗನವಾಡಿ ಸಹಾಯಕಿ ಮೊದಲು ಮೊಟ್ಟೆ ಹಾಕಿದರು. ಮಕ್ಕಳು ಅದನ್ನು ಬಾಯಲ್ಲಿ ಇಟ್ಟುಕೊಳ್ಳುವ ವೇಳೆಗೆ ಅದನ್ನು ಕಸಿದುಕೊಂಡು ತಟ್ಟೆಯಿಂದಲೇ ತೆಗೆದು ಹಾಕಿದ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಸಿಬ್ಬಂದಿಯ ಈ ಕಾರ್ಯವೈಖರಿಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಜೆ., ಸಹಾಯಕಿ ಶೈನಜಾ ಬೇಗಂ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗ್ರಾಮಸ್ಥರೂ ಘಟನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

‘ಗುಂಡೂರಿನ ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಯನ್ನು ಮಕ್ಕಳ ತಟ್ಟೆಗೆ ಹಾಕಿ ಬಳಿಕ ವಾಪಸ್‌ ಪಡೆದು ದುರಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT