ಯಲಬುರ್ಗಾ: ‘ರೈತರು ಹಾಗೂ ಜಾನುವಾರುಗಳ ಹಿತ ಕಾಪಾಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಪಶು ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ಹೆಚ್ಚಿನ ಕಾಳಜಿ ತೋರಿದ ಪರಿಣಾಮ ಸಣ್ಣ ಹಳ್ಳಿಗಳಲ್ಲಿಯೂ ಪಶು ಆಸ್ಪತ್ರೆ ನಿರ್ಮಾಣಗೊಂಡಿವೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ತಾಲ್ಲೂಕಿನ ವಜ್ರಬಂಡಿ ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಉದ್ಘಾಟಿಸಿ ಮಾತನಾಡಿದ ಅವರು, ‘ರೈತರ ಕಲ್ಯಾಣಕ್ಕಾಗಿ ಕೆರೆಗಳ ಅಭಿವೃದ್ಧಿ, ಕಚ್ಚಾ ರಸ್ತೆ ಅಭಿವೃದ್ಧಿ ಜತೆ ದನ ಕರುಗಳು, ಕುರಿ ಮೇಕೆಗಳ ಆರೋಗ್ಯ ಸಂರಕ್ಷಣೆಗಾಗಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಲಾಗಿದೆ’ ಎಂದರು.

‘ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಅಡಿಯಲ್ಲಿ ಸಾವಿರಾರು ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ತರಲಾಗಿದೆ. ಗ್ರಾಮಸ್ಥರು ಸಹಕರಿಸಿದರೆ, ಜಮೀನು ಒದಗಿಸಿದರೆ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಗ್ರಾಮೀಣ ಪ್ರದೇಶದ ಜನರು ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.

ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಪಿ.ಎಂ. ಮಲ್ಲಯ್ಯ, ತಹಶೀಲ್ದಾರ್ ಬಸವರಾಜ ತೆನ್ನಳ್ಳಿ, ತಾ.ಪಂ ಇಒ ಸಂತೋಷ ಪಾಟೀಲ, ಸಹಾಯಕ ನಿರ್ದೇಶಕ ಪ್ರಕಾಶ ಚೂರಿ, ಸಿಪಿಐ ಮೌನೇಶಗೌಡ ಮಾಲಿಪಾಟೀಲ, ಪಿಡಿಒ ಹನಮಂತರಾಯ ಯಂಕಂಚಿ, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು ಹಾಗೂ ಮುಖಂಡರಾದ ಕೆರಿಬಸಪ್ಪ ನಿಡಗುಂದಿ, ವೀರನಗೌಡ ಪೊಲೀಸ್ಪಾಟೀಲ, ಎಂ.ಎಫ್.ನದಾಫ್, ಆನಂದ ಉಳ್ಳಾಗಡ್ಡಿ, ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡ್ಡಿ, ಸುಧೀರ ಕೊರ್ಲಳ್ಳಿ, ಹುಲಗಪ್ಪ ಬಂಡಿವಡ್ಡರ ಸೇರಿ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.