ಕೊಪ್ಪಳ: ಹನುಮನ ಜನ್ಮಸ್ಥಳ ಎನ್ನುವ ಪ್ರತೀತಿ ಹೊಂದಿರುವ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಸಂಬಂಧ ಚರ್ಚಿಸಲು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಜೊತೆ ನಿಗದಿಯಾಗಿದ್ದ ಸಭೆ ಮತ್ತೆ ಮುಂದೂಡಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿತ್ತು. ಈ ಮೊದಲು ಜೂ. 15ರಂದು ನಡೆಯಬೇಕಿದ್ದ ಸಭೆ 24ಕ್ಕೆ ಮುಂದೂಡಲಾಗಿತ್ತು. ಈಗ ಶನಿವಾರಕ್ಕೆ (ಜೂ. 25) ಮುಂದೂಡಲಾಗಿದೆ.

ಸಭೆ ಯಾಕೆ ಮುಂದೂಡಲಾಗಿದೆ ಎನ್ನುವುದು ಗೊತ್ತಿಲ್ಲ. ಶನಿವಾರ ಮಧ್ಯಾಹ್ನ 12ಕ್ಕೆ ಸಭೆ ನಡೆಯಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.