ಗಂಗಾವತಿ: ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತಿ, ದೇವರ ದರ್ಶನ ಪಡೆದ ನಂತರ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದ ಮೃತಪಟ್ಟ ಘಟನೆ ಶುಕ್ರವಾರ ಜರುಗಿದೆ.

ಮೃತಪಟ್ಟ ವ್ಯಕ್ತಿ ದಾವಣಗೆರೆಯ ಹರಿಹರ ತಾಲ್ಲೂಕಿನ ಗುಳದಹಳ್ಳಿ ಗ್ರಾಮದ ನಿವಾಸಿ ರಾಜಪ್ಪ (57) ಎಂದು ತಿಳಿದು ಬಂದಿದೆ.

ಕುಟುಂಬಸ್ಥರೊಂದಿಗೆ ರಾಜಪ್ಪ ಹಂಪಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು. ಶುಕ್ರವಾರ ಸಂಜೆ ಬೆಟ್ಟ ಏರಿ, ಆಂಜನೇಯನ ದರ್ಶನ ಪಡೆದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ದೇವಸ್ಥಾನದ ಸಿಬ್ಬಂದಿ ವ್ಯಕ್ತಿಯನ್ನ ಕೆಳಗೆ ತಂದಿದ್ದಾರೆ. ತುರ್ತು ಚಿಕಿತ್ಸೆಗೆ ಆನೆಗೊಂದಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಕರೆದೊಯ್ಯಲಾಗಿದೆ. ನಂತರ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-35-435644229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.