ಗಂಗಾವತಿ (ಕೊಪ್ಪಳ): ತಾಲ್ಲೂಕಿನ ಧಾರ್ಮಿಕ ಪುಣ್ಯ ಕ್ಷೇತ್ರ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ವ್ಯಕ್ತಿಯೊಬ್ಬರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗುಜರಾತ ರಾಜ್ಯದ ಅರ್ಜುನ (54) ಮೃತರು.

ಅರ್ಜುನ ಅವರು ಸ್ನೇಹಿತರೊಂದಿಗೆ ಹಂಪಿ ಪ್ರವಾಸ ಕೈಗೊಂಡು, ಹನುಮನ ಜನ್ಮಸ್ಥಳ ಅಂಜನಾದ್ರಿಗೆ ಭೇಟಿ ನೀಡಿದ್ದರು. ಹನುಮನ ದರ್ಶನಕ್ಕೆ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಏರುವಾಗ ಎದೆಯಲ್ಲಿ ನೋವು ಕಾಣಿಸಿಕೊಂಡು ನಿಯಂತ್ರಣತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಚಿಕಿತ್ಸೆಗಾಗಿ ಸ್ಥಳೀಯರ ಸಹಾಯದಿಂದ ಆನೆಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ. ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಗೆ ತೆರಳಲು ಸೂಚಿಸಿದ್ದು, ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.