ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಅಂಜನಾದ್ರಿ ದೇವಸ್ಥಾನ: ಆ.17 ರವರೆಗೆ ಪ್ರವೇಶ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ (ಕೊಪ್ಪಳ ಜಿಲ್ಲೆ): ಕೊರೊನಾ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕಿನ ಆನೆಗುಂದಿಯ ಅಂಜನಾದ್ರಿ ದೇವಸ್ಥಾನಕ್ಕೆ ಆ.17 ರವರೆಗೆ ಭಕ್ತರ ಪ್ರವೇಶ ನಿಷೇಧಿಸಿ ಭಾನುವಾರ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಲಾಕ್‌ಡೌನ್ ವಿನಾಯಿತಿಯ ನಂತರ ಅಂಜನಾದ್ರಿ ದೇವಸ್ಥಾನಕ್ಕೆ ನಿತ್ಯ ಸುಮಾರು 4 ಸಾವಿರ ಭಕ್ತರು ಆಗಮಿಸುತ್ತಿದ್ದರು. ಶನಿವಾರ ಮತ್ತು ಭಾನುವಾರ ಕನಿಷ್ಠ 7 ಸಾವಿರ ಜನ ಭಕ್ತರು ದೇವರ ದರ್ಶನಕ್ಕೆ ಬರುತ್ತಿದ್ದರು‌.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ‌ 3ನೇ ಅಲೆ ಹೆಚ್ಚಾಗಿದೆ. ರಾಜ್ಯದಲ್ಲಿ ಕೊರೊನಾ ತಡೆಗಟ್ಟಲು ಸರ್ಕಾರ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಲು ಆದೇಶ ಹೊರಡಿಸಿದೆ.

ಇದರನ್ವಯ ಜಿಲ್ಲಾಧಿಕಾರಿ ಅವರ ಆದೇಶದಂತೆ ವಿಪತ್ತು ನಿರ್ವಹಾಣಾ ಕಾಯ್ದೆ 2005ರ ಕಾಯ್ದೆ ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಸೆಕ್ಷನ್ ಅಡಿಯಲ್ಲಿ ಅಂಜನಾದ್ರಿ ಪರ್ವತ ಸುತ್ತಮುತ್ತ 2.ಕಿಮಿ ವ್ಯಾಪ್ತಿಯಲ್ಲಿ ಆಗಸ್ಟ್‌ 2ರಿಂದ ಆ.17ರವರಗೆ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.