ಕೊಪ್ಪಳ: ಕೆಲವು ದಿನಗಳ ಹಿಂದೆ ಜಿಲ್ಲೆಯ ಗಂಗಾವತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದಿದ್ದರಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲೆಯ ಉಪನಿರ್ದೇಶಕ ಸೋಮಶೇಖರ ಬಿರಾದಾರ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಿ ಮಾತೃ ಇಲಾಖೆಗೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಸೋಮಶೇಖರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಈ ಹುದ್ದೆಯಿಂದ ಉಪನಿರ್ದೇಶಕ ಸ್ಥಾನಕ್ಕೆ ನಿಯೋಜನೆಗೊಂಡು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು.

ಗಂಗಾವತಿಯ ಸರ್ಕಾರಿ ಗೋದಾಮಿನಲ್ಲಿ 250 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕುರಿತು ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಸರಿಯಾಗಿ ಮೇಲುಸ್ತುವಾರಿ ಮಾಡುವಲ್ಲಿ ಸೋಮಶೇಖರ ವಿಫಲರಾಗಿದ್ದಾರೆ. ಪ್ರಕರಣ ಕುರಿತು ಸೂಕ್ತ ಮಾಹಿತಿ ಒದಗಿಸುವಂತೆ ಕೇಳಿದ್ದರೂ ಮಾಹಿತಿ ನೀಡಿಲ್ಲ. ಆದ್ದರಿಂದ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಾತೃ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಈಗ ಈ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.