ಸೋಮವಾರ, ಜುಲೈ 26, 2021
26 °C
ಜಿಲ್ಲೆಯಲ್ಲಿ ಒಟ್ಟು 21 ಪ್ರಕರಣಗಳು ದಾಖಲು

ಕೊಪ್ಪಳ | ಮತ್ತೆ ನಾಲ್ಕು ಕೋವಿಡ್‌ ಸೋಂಕು ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ನಾಲ್ಕು ಕೋವಿಡ್‌ ಸೋಂಕು ಪ್ರಕರಣಗಳು ದಾಖಲಾಗಿವೆ.

ಕಾರಟಗಿ ತಾಲ್ಲೂಕಿನ ತಿಮ್ಮಾಪುರದಲ್ಲಿ ರೋಗಿ ಸಂಖ್ಯೆ– 5835 ನ ಪ್ರಾಥಮಿಕ ಸಂಪರ್ಕ ಹೊಂದಿದ್ದ 29 ವರ್ಷದ ಮಹಿಳೆಗೆ ಸೋಂಕು ಧೃಢಪಟ್ಟಿದೆ. 

ಗಂಗಾವತಿ ತಾಲ್ಲೂಕಿನಲ್ಲಿ ಮೂರು ಸೋಕಿನ ಪ್ರಕರಣಗಳು ಪತ್ತೆಯಾಗಿವೆ. ಜೂನ್‌ 3 ರಂದು ಉಡುಪಿಯ ಕುಂದಾಪುರದಿಂದ ಕೆಎಸ್‌ಆರ್‌ಟಿಸಿ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸಿದ್ದ ಇಲ್ಲಿನ ಶ್ರೀರಾಮ ನಗರದ 31 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಜೂನ್‌ 9 ರಂದು  ಮುಂಬೈನಿಂದ ಗಂಗಾವತಿ ನಗರಕ್ಕೆ ಆಗಮಿಸಿದ್ದ ರೋಗಿ ಸಂಖ್ಯೆ– 7103 ಅವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಗನಿಗೆ (41 ವರ್ಷ) ಸೋಂಕು ತಗುಲಿದೆ. ತಂದೆ, ತಾಯಿ ಹಾಗೂ ಮಗ ಮುಂಬೈನಿಂದ ಗಂಗಾವತಿ ಆಗಮಿಸಿದ್ದರು. 

ಗಂಗಾವತಿ ಉಪವಿಭಾಗ ಆಸ್ಪತ್ರೆಯಯಲ್ಲಿ ಸ್ಟಾಫ್‌ ನರ್ಸ್‌ ಆಗಿದ್ದ 30 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇವರು ಯಾವುದೇ ಪ್ರಯಾಣದ ಹಿನ್ನೆಲೆ ಹೊಂದಿಲ್ಲವಾದರೂ ಪರೀಕ್ಷೆಯಲ್ಲಿ ಪಾಸಿಟಿವ್‌ ವರದಿ ಬಂದಿದೆ. ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಯನ್ನು ರದ್ದು ಪಡಿಸಲಾಗಿದೆ. ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಮಾಹಿತಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. 

ಈ ಎಲ್ಲ ಸೋಂಕು ಪೀಡಿತರ ವಾಸಸ್ಥಳಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೆ ಎಲ್ಲ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಕೋವಿಡ್‌ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ಗೆ ವರ್ಗಾಯಿಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 21 ಕೋವಿಡ್‌ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಗುಣಮುಖ ಹೊಂದಿದ 9 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು