ಮಂಗಳವಾರ, ಸೆಪ್ಟೆಂಬರ್ 28, 2021
23 °C

ಹನುಮಸಾಗರ: ಕೃಷ್ಣಾ ಬಿ ಸ್ಕೀಮ್ ಯೋಜನೆ ಅನುಷ್ಠಾನಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನುಮಸಾಗರ: ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಕೃಷ್ಣಾ ಬಿ ಸ್ಕೀಮ್ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಹಳ್ಳೂರ ಈ ಕುರಿತು ಮಾಹಿತಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕೃಷ್ಣಾ ಬಿ ಸ್ಕೀಮ್ ಯೋಜನೆ ಪೂರ್ಣಗೊಳಿಸುವುದಕ್ಕೆ ಮನವಿ ಸಲ್ಲಿಸಿದ್ದೇವೆ.  ಮುಖ್ಯಮಂತ್ರಿ ಅವರು ಯೋಜನೆಗೆ ಹಣಕಾಸಿನ ನೆರವು ನೀಡುವುದಾಗಿ ಹಾಗೂ ತ್ವರಿತವಾಗಿ ಕಾಮಗಾರಿ ಆರಂಭಿಸುವ ಕುರಿತು ಭರವಸೆ ನೀಡಿದ್ದಾರೆ‘ ಎಂದು ಹೇಳಿದರು.

ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ಕೆ.ಶರಣಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.