ಕೊಪ್ಪಳ: ‘ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು ತಿರಸ್ಕರಿಸಿ ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ನಿರಂತರವಾಗಿ ಶ್ರಮಿಸುತ್ತಿದ್ದು, ನಮಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಬೇಕು’ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದರು.

ಫೆ. 19ರಿಂದ ಪಕ್ಷದ ವತಿಯಿಂದ ದೇವನಹಳ್ಳಿಯಲ್ಲಿ ಪ್ರಾರಂಭವಾದ ಬೈಕ್ ಜಾಥಾ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಬುಧವಾರ ನಗರಕ್ಕೆ ಪ್ರವೇಶಿಸಿತು.

ಆಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಸ್ವಾರ್ಥದ ರಾಜಕಾರಣ ಮಾಡುತ್ತಿವೆ’ ಎಂದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಎಸ್.ಎಚ್. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ‘ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು. ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕೆಆರ್‌ಎಸ್ ಬೆಂಬಲಿಸಬೇಕು. ಈ ಕಾರಣಕ್ಕಾಗಿ ರಾಜ್ಯದಾದ್ಯಂತ ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಕೃಷ್ಣ ವಿ. ಬಿ., ಚಂದ್ರಶೇಖರ್ ಮಠದ, ಬಿ. ಜಿ ಕುಂಬಾರ್, ಜಿಲ್ಲಾಧ್ಯಕ್ಷೆ ಆಶಾ ವೀರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ಗುಡಚಳ್ಳಿ, ಕುಮಾರ್, ಭಾವನಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.