ಕೊಪ್ಪಳ: ಕರ್ನಾಟಕ ಮುಸ್ಲಿಂ ಯುನಿಟಿ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಜಿಲಾನ್ ಕಿಲ್ಲೇದಾರ ನೇಮಕಗೊಂಡಿದ್ದಾರೆ.
ಭಾನುವಾರ ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಜಬ್ಬಾರ್ ಕಲಬುರ್ಗಿ ಅವರು ಈ ನೇಮಕ ಮಾಡಿದರು.
‘ಸಂಘಟನೆಯು ಮುಸ್ಲಿಂ ಸಮುದಾಯದ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ, ಶೈಕ್ಷಣಿಕ ಮತ್ತು ಸರ್ಕಾರಿ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುವೆ’ ಎಂದು ಕಿಲ್ಲೇದಾರ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.