ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಗೆ ದೇವದಾಸಿ ಪಟ್ಟ ಕಟ್ಟಿದ್ದ ಮೂವರ ಬಂಧನ

Last Updated 29 ಡಿಸೆಂಬರ್ 2022, 5:28 IST
ಅಕ್ಷರ ಗಾತ್ರ

ಕೊಪ್ಪಳ: ಅನಾರೋಗ್ಯದಿಂದ ಬಳಲುತ್ತಿದ್ದ ಕೊಪ್ಪಳ ತಾಲ್ಲೂಕಿನ 21 ವರ್ಷದ ಯುವತಿಗೆ ಚಿಕಿತ್ಸೆ ಕೊಡಿಸದೇ ದೇವದಾಸಿ ಪಟ್ಟ ಕಟ್ಟಿದ್ದ ಆರೋಪದ ಮೇಲೆ ಆಕೆಯ ಪೋಷಕರು ಮತ್ತು ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಯುವತಿಯ ತಂದೆ ಯಮನೂರಪ್ಪ, ತಾಯಿ ಹುಲಿಗೆವ್ವ ಮತ್ತು ಸಹೋದರಿ ಮೂಕವ್ವ ಅವರನ್ನು ಬಂಧಿಸಲಾಗಿದೆ. ಮೂಕವ್ವ ಪತಿ ಹನುಮಪ್ಪನ ಪತ್ತೆಗೆ ಶೋಧ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘2018ರ ಬಳಿಕ ಜಿಲ್ಲೆಯಲ್ಲಿ ಪತ್ತೆಯಾದ ಮೊದಲ ದೇವದಾಸಿ ಪ್ರಕರಣವಿದು. ಯುವತಿ ಚೇತರಿಸಿಕೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ತಿಳಿಸಿದರು.

ಯುವತಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದ ಕಾರಣ ‘ಮುತ್ತು’ ಕಟ್ಟಿಸಿದರೆ ಗುಣಮುಖ ಆಗುವರು ಎಂಬ ಮೂಢನಂಬಿಕೆಯಿಂದ ಹೆತ್ತವರೇ ಹುಲಿಗಿಯಲ್ಲಿ ಕಳೆದ ಮೇ ತಿಂಗಳಲ್ಲಿ ಯುವತಿಯನ್ನು ದೇವದಾಸಿಯಂಥ ಅನಿಷ್ಠ ಪದ್ಧತಿಗೆ ನೂಕಿದ್ದರು. ಇದರ ಬಗ್ಗೆ ಸಂಶಯಪಟ್ಟ ದಲಿತ ಸಮುದಾಯದ ಮುಖಂಡರು, ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಅವರು ಗ್ರಾಮಕ್ಕೆ ಭೇಟಿ ನೀಡಿದಾಗ, ಪ್ರಕರಣ ಬೆಳಕಿಗೆ ಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT