ಕೊಪ್ಪಳ: ಜಿಲ್ಲೆಯ ಕಾರಟಗಿ ನಗರದಲ್ಲಿ ಶನಿವಾರ ಅಪರಿಚಿತ ದುಷ್ಕರ್ಮಿಗಳು, ದಂಪತಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದು ತೀವ್ರ ಗಾಯದಿಂದ ಪತ್ನಿ ಮೃತಪಟ್ಟಿದ್ದಾರೆ.

ಪತಿಗೆ ಗಂಭೀರ ಗಾಯಗಳಾಗಿದ್ದು, ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಂಪತಿಯನ್ನು ತ್ರೀವೇಣಿ (28) ಮತ್ತು ವಿನೋದ (35) ಎಂದು ಗುರುತಿಸಲಾಗಿದೆ. ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಮನೆ ಎದುರೇ ಹಲ್ಲೆ ನಡೆದಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಮರ್ಯಾದೆಗೇಡು ಹತ್ಯೆ ಪ್ರಕರಣ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ತ್ರಿವೇಣಿ ಕಾರಟಗಿಯ ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮ ವಿನೋದ (35) ಸ್ಥಳೀಯ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ವೇಳೆ ತ್ರಿವೇಣಿ ಪರಿಚಯವಾಗಿತ್ತು. ಅವರಿಬ್ಬರ ಮದುವೆ ತ್ರಿವೇಣಿ ಅವರ ಮನೆಯವರಿಗೆ ಇಷ್ಟ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ ಭೇಟಿ ನೀಡಿ ಪರಿಶೀಲಿಸಿದರು. ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.