ಕುಷ್ಟಗಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ವತಿಯಿಂದ ಬುಧವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಆಚರಿಸಲಾಯಿತು.

ಶಾಸಕ ದೊಡ್ಡನಗೌಡ ಪಾಟೀಲ ಪಕ್ಷದ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಮುತ್ಸದ್ದಿಯಾಗಿದ್ದ ವಾಜಪೇಯಿ ಅವರು ದೇಶಕಂಡ ಅಪರೂಪದ ರಾಜಕಾರಣಿ. ರಾಜಕೀಯ ವಲಯದಲ್ಲೂ ಆಜಾತ ಶತ್ರು ಎಂದೆ ಗುರುತಿಸಿಕೊಂಡಿದ್ದರು. ದೇಶದ ಅಭಿವೃದ್ಧಿ ಮತ್ತು ರಕ್ಷಣೆ ವಿಷಯದಲ್ಲಿ ಅವರು ನೀಡಿದ ಕೊಡುಗೆ ಅಮೋಘ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮಹಾಂತೇಶ ಬದಾಮಿ, ಯುವ ಮೋರ್ಚಾ ಅಧ್ಯಕ್ಷ ಉಮೇಶ್ ಯಾದವ, ಪ್ರಮುಖರಾದ ಕೆ.ಮಹೇಶ್, ಈರಣ್ಣ ಸಬರದ, ಅಶೋಕ ಬಳೂಟಗಿ, ಪುರಸಭೆ ಸದಸ್ಯರಾದ ಅಂಬಣ್ಣ ಭಜಂತ್ರಿ, ಮಹಾಂತೇಶ ಕಲಭಾವಿ, ಚಂದ್ರಕಾಂತ ವಡಗೇರಿ, ಮಹಿಳಾ ಘಟಕದ ಶೈಲಜಾ ಬಾಗಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.