ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಬ್ಯಾಂಕ್‌ ಕಳ್ಳತನಕ್ಕೆ ಯತ್ನ

Published 13 ಜನವರಿ 2024, 6:57 IST
Last Updated 13 ಜನವರಿ 2024, 6:57 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ಬಂಡಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಕಳ್ಳರು ಕನ್ನ ಹಾಕಲು ಯತ್ನಿಸಿದ ಘಟನೆ ನಡೆದಿದೆ.  

ಬ್ಯಾಂಕ್‌ನ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಿದ್ದು, ಗುದ್ದಲಿಯಿಂದ‌ ಬಾಗಿಲು ಮುರಿಯಲು ಮುಂದಾಗಿದ್ದರು. ಬಾಗಿಲು ಮುರಿಯಲು ಸಾಧ್ಯವಾಗದೇ ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಕಿತ್ತು ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾಜೆಕ್ಟರ್‌ ಕಳ್ಳತನ: ಕೊಪ್ಪಳದ ತಾಲ್ಲೂಕಿನ ಲೇಬಗೇರಿ ಗ್ರಾಮದ ಶಾಲೆಯಲ್ಲಿ ಸರ್ಕಾರದಿಂದ ನೀಡಲಾಗಿದ್ದ ಸ್ಮಾರ್ಟ್‌ ಕ್ಲಾಸ್‌ನ ಸಲಕರಣೆಗಳನ್ನು ಕಳ್ಳತನ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹42 ಸಾವಿರ ಎಂದು ದೂರು ನೀಡಿರುವ ಶಿಕ್ಷಕ ರಘುನಾಥ ಸಂಗಳದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT