ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ

ನೂತನ ಕೃಷಿ ಕಾಯ್ದೆ: ಕಾಂಗ್ರೆಸ್‌ನಿಂದ ಅಪಪ್ರಚಾರ–ಶಾಸಕ
Last Updated 12 ಜೂನ್ 2021, 12:18 IST
ಅಕ್ಷರ ಗಾತ್ರ

ಕುಕನೂರು: ‘ಹಿಂದೆ ರೈತರು ಅಧಿಕಾರಿಗಳ ಬಳಿಗೆ ತೆರಳಿ ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕಾಗಿತ್ತು. ಈಗ ಕೃಷಿ ಇಲಾಖೆಯೇ ರೈತರ ಮನೆ ಬಾಗಿಲಿಗೆ ತೆರಳಿ, ಕೃಷಿ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದೆ’ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಕೃಷಿ ಇಲಾಖೆ ವತಿಯಿಂದ ನಡೆದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತ ಕಷ್ಟಪಟ್ಟು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಲು ನೇರ ಖರೀದಿಗಾಗಿ ಪ್ರತಿ ಹಳ್ಳಿಯಲ್ಲಿ ಎಪಿಎಂಸಿ ಅಸ್ತಿತ್ವಕ್ಕೆ ತರುವ ಸಲುವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ರೈತರಿಗೆ ದಿಕ್ಕುತಪ್ಪಿಸುವ ಕುತಂತ್ರ ಮಾಡುತ್ತಿದೆ ಎಂದರು.

ಟ್ರ್ಯಾಕ್ಟರ್ ಖರೀದಿ, ಬೀಜ, ಗೊಬ್ಬರಕ್ಕೆ ಒಳ್ಳೆಯ ಸಬ್ಸಿಡಿ ದೊರೆಯುತ್ತಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಉಪಯೋಗಕಾರಿಯಾಗಿವೆ. ಅವುಗಳ ಬಗ್ಗೆಯೇ ರೈತರಿಗೆ ಮಾಹಿತಿ ನೀಡುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯ ಪ್ರತಿ ಹಳ್ಳಿಯಲ್ಲಿ ನಡೆಯಬೇಕಿದೆ ಎಂದು ತಿಳಿಸಿದರು.

ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣನವರ್, ಶಿರಸ್ತೇದಾರ ಮುಸ್ತಫಾ, ಕೃಷಿ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ನಿಂಗಣ್ಣ ಬಿರಾದಾರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಶಂಬಣ್ಣ ಜೋಳದ, ಶಿವಕುಮಾರ ನಾಗಲಾಪೂರಮಠ, ಮಾರುತಿ ಗಾವರಾಳ, ಕಳಕಪ್ಪ ಕಂಬಳಿ, ಬಸವರಾಜ ಅಡವಿ, ಕನಕಪ್ಪ ಬ್ಯಾಡರ್, ಮಹೇಶ ಕವಲೂರು, ಬಸವರಾಜ, ಸಹಾಯಕ ಕೃಷಿ ನಿರ್ದೇಶಕ ಅಜ್ಮಿರ ಅಲಿ, ಪಂಪಾಪತಿ, ಗೋಣಿ ಬಸಪ್ಪ, ರಾಜೇಶ್ವರಿ ಹಾಗೂ ಶಿವಾನಂದ ಮಾಳಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT