ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಕ್ಷಯರೋಗ ಜಾಗೃತಿ; ಮಾ.24ರಂದು ಸೈಕಲ್‌ ಜಾಥಾ

Last Updated 22 ಮಾರ್ಚ್ 2021, 11:50 IST
ಅಕ್ಷರ ಗಾತ್ರ

ಗಂಗಾವತಿ: ಕ್ಷಯರೋಗ ನಿರ್ಮೂಲನೆಗಾಗಿ ಮಾ.24 ರಂದು ಗಂಗಾವತಿಯಿಂದ ಅಂಜನಾದ್ರಿ ಬೆಟ್ಟದವರೆಗೆ ಸೈಕಲ್ ಜಾಥಾ ಆಯೋಜಿಸಲಾಗಿದೆ ಎಂದು ಸರ್ಕಾರಿ ಉಪವಿಭಾಗ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಹೇಳಿದರು.

ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಜಿಲ್ಲೆಯಲ್ಲಿ ಕ್ಷಯರೋಗ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದರು.

ಮಾ.24 ರ ಬೆಳಿಗ್ಗೆ 6 ಗಂಟೆಗೆ ನಗರದ ಎಪಿಎಂಸಿ ಆವರಣದಿಂದ ಎರಡು ತಂಡಗಳು ಜಾಥಾ ಪ್ರಾರಂಭಿಸಲಿವೆ. ಒಂದು ತಂಡ ನಗರ ವ್ಯಾಪ್ತಿಯಲ್ಲಿ ಹಾಗೂ ಇನ್ನೊಂದು ತಂಡ ಆನೆಗೊಂದಿ ಮಾರ್ಗವಾಗಿ ಸಂಚರಿಸಿ ಅಂಜನಾದ್ರಿ ತಲುಪಲಿದೆ. ಬಳಿಕ ಸಂಜೆ ಐಎಂಐ ಭವನದಲ್ಲಿ ತಿಳವಳಿಕೆ ಕಾರ್ಯಕ್ರಮ ನಡೆಯಲಿದ್ದು, ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಸೈಕಲ್‌ ಜಾಥಾದಲ್ಲಿ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕನಂದಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ ಎಂ.ಜಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಬಿಇಒ ಸೋಮಶೇಖರಗೌಡ, ಡಾ.ಸತೀಶ ರಾಯ್ಕರ್, ಡಾ.ಶಿವಾನಂದ, ಚಿನ್ನುಪಾಟೀ ಪ್ರಭಾಕರ, ಮಲ್ಲಿಕಾರ್ಜುನ, ಶಿವಾನಂದ್, ರಾಘವೇಂದ್ರ ಜೋಶಿ, ನಾಗರಾಜ, ಮಹಮದ್ ಇಬ್ರಾಹಿಂ, ರಾಜೀವ್, ಮಂಜುನಾಥ ಹಾಗೂ ಸ್ಯಾಮವೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT