ಭಾನುವಾರ, ಜನವರಿ 23, 2022
27 °C

ಕೊಪ್ಪಳ: ಫ್ಲೋರೊಸಿಸ್ ಜಾಗೃತಿಗೆ ಬೀದಿನಾಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳವಂಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಗಿಲ್ ಮಲ್ಲಯ್ಯ ಅಂಗವಿಕಲರ ಸಂಘದ ಸಹಯೋಗದಲ್ಲಿ ಸಮೀಪದ ಹಳೆ ಗೊಂಡಬಾಳ ಗ್ರಾಮದಲ್ಲಿ ಬೀದಿನಾಟಕ ಪ್ರದರ್ಶಿಸುವ ಮೂಲಕ ಪ್ಲೋರೊಸಿಸ್ ಜಾಗೃತಿ ಮೂಡಿಸಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುಡದಪ್ಪ ಅವರು ಹಲಗೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಸದಸ್ಯರಾದ ಕೊಟ್ರೇಶ್, ಕಾಸಿಂಸಾಬ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಈಶಪ್ಪ, ಆಶಾ ಕಾರ್ಯಕರ್ತೆಯರಾದ ಸುನೀತಾ ಇದ್ದರು.

ವೀರೇಶ ಹಾಲಗುಂಡಿ, ಹನುಮಂತಪ್ಪ ಎಲಿಗಾರ, ದವಲಸಾಬ ಅತ್ತಾರ, ಸಿದ್ದಲಿಂಗಯ್ಯ ಗೋರ್ಲೆಕೊಪ್ಪ, ಮಾಹದೇವಪ್ಪ, ಶರಣಪ್ಪ, ಸಿದ್ದಲಿಗಮ್ಮ ಹಾಲಗುಂಡಿ, ಶಿವಲಿಂಗಮ್ಮ ಗ್ರಾಮದ ಹಿರಿಯರು ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು