ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | 'ಮಣ್ಣಿನ ಪ್ರಣತಿಯಿಂದ ದೀಪ ಹಚ್ಚಲು ಜಾಗೃತಿ'

Published : 9 ನವೆಂಬರ್ 2023, 16:36 IST
Last Updated : 9 ನವೆಂಬರ್ 2023, 16:36 IST
ಫಾಲೋ ಮಾಡಿ
Comments

ಕೊಪ್ಪಳ: ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ಸಂಜೀವಿನಿ ಯೋಜನೆಯಡಿ ದೀಪ ಸಂಜೀವಿನಿ ಕಾರ್ಯಕ್ರಮ ನಡೆಯಿತು. 

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ ಕಾರ್ಯಕ್ರಮ ಉದ್ಘಾಟಿಸಿ ‘ರಾಜ್ಯ ಸರ್ಕಾರದ ಸೂಚನೆಯಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರತಿ ಮನೆಮನೆಗಳಲ್ಲಿ ಮಣ್ಣಿನಿಂದ ತಯಾರಿಸಲಾದ ದೀಪಗಳನ್ನು ಹಚ್ಚಿ ಬೆಳಕು ಚೆಲ್ಲುವಂತೆ ಜಾಗೃತಿ ಮೂಡಿಸಬೇಕು’ ಎಂದರು.

‘ಇದಕ್ಕಾಗಿ ಸಂಜೀವಿನಿ ಮಹಿಳೆಯರು ಮಣ್ಣಿನಿಂದ ತಯಾರಿಸಿದ ದೀಪಗಳನ್ನು ಮಾರಾಟ ಮಾಡಲು ಸೂಕ್ತ ವೇದಿಕೆ ಕಲ್ಪಿಸಲಾಗಿದ್ದು, ಇದು ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬನೆಗೂ ಅನುಕೂಲವಾಗಲಿದೆ. ಸದಸ್ಯೆಯರಿಗೆ ಆದಾಯ ಸೃಜನೆಯಾಗುತ್ತದೆ. ಮಹಿಳೆಯರು ಕೈಗೊಂಡ ದೀಪಗಳ ಚಟುವಟಿಕೆ ತಯಾರಿಕೆಗಳಿಗೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಹೇಶ್, ತಾಲ್ಲೂಕು ಯೋಜನಾಧಿಕಾರಿ ರಾಜೇಸಾಬ್ ನದಾಫ್, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ಸಂಜೀವಿನಿ ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಅಂಬಣ ಕಟಗಿ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್, ವಲಯ ಮೇಲ್ವಿಚಾರಕ ವೆಂಕಟೇಶ್, ವಿದ್ಯಾಲಕ್ಷ್ಮಿ, ನವೀನ್, ಮೆಂಟರ್‌ ಕಲ್ಲಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT